ರಾಜ್ಯದಲ್ಲಿ ಹೆಚ್ಚಾದ ಡೆಂಗ್ಯೂ ಪ್ರಕರಣ…!

ಬೆಂಗಳೂರು:

    2023 ಕ್ಕೆ ಹೋಲಿಸಿದರೆ ಈ ವರ್ಷದ ಮೊದಲಾರ್ಧದಲ್ಲಿ ಡೆಂಗ್ಯೂ ಪ್ರಕರಣಗಳಲ್ಲಿ ಸುಮಾರು ಶೇ. 60 ರಷ್ಟು ಹೆಚ್ಚಳವನ್ನು ರಾಜ್ಯ ಆರೋಗ್ಯ ಇಲಾಖೆ ದಾಖಲಿಸಿದೆ.

    ಜೂನ್ 2023ರವರೆಗೆ ಒಟ್ಟು ಪ್ರಕರಣಗಳ ಸಂಖ್ಯೆ 2,003ರಷ್ಟಿತ್ತು. ಅದು ಈ ವರ್ಷದಲ್ಲಿ 4,886ಕ್ಕೆ ಏರಿಕೆಯಾಗಿದೆ. ಈ ಪೈಕಿ 1,230 ಪ್ರಕರಣಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ ದಾಖಲಾಗಿದ್ದರೆ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಒಟ್ಟು 30 ಪ್ರಕರಣಗಳು ದಾಖಲಾಗಿವೆ.

   ನಿಗಾ ವಹಿಸಲು ಆರೋಗ್ಯ ಸಿಬ್ಬಂದಿಯನ್ನು ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶುಕ್ರವಾರದಂದು ಪಟ್ಟಣಗಳಿಗೆ ನಿಯೋಜಿಸಲಾಗುತ್ತಿದೆ. ಇದರಿಂದ ಸೋಂಕನ್ನು ಕಡಿಮೆ ಮಾಡಲು ಮತ್ತು ಮಾಹಿತಿ, ಶಿಕ್ಷಣ ಮತ್ತು ಸಂವಹನದ ಮೂಲಕ ಸಾರ್ವಜನಿಕರಿಗೆ ಶಿಕ್ಷಣ ನೀಡಲು ಸಹಾಯ ಮಾಡುತ್ತದೆ ಎಂದು ಆರೋಗ್ಯ ಆಯುಕ್ತ ಡಿ. ರಂದೀಪ್ ತಿಳಿಸಿದರು.

   ಧೀರ್ಘ ಕಾಲ ನೀರಿನ ಸಂಗ್ರಹಣೆ ಸೊಳ್ಳೆಗಳ ಸಂತಾನೋತ್ಪತ್ತಿಯನ್ನು ತೀವ್ರಗೊಳಿಸಿದೆ. ಅಲ್ಲದೇ, ನೀರಿನ ಕೊರತೆಯಿಂದಾಗಿ ಪಾತ್ರೆಗಳಲ್ಲಿ ಶೇಖರಿಡುವುದು ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಿ ಡೆಂಗ್ಯೂ ಉಲ್ಬಣಿಸುತ್ತದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಡೆಂಗ್ಯೂ ಜ್ವರದ ಶಂಕಿತ ಪ್ರಕರಣಗಳ ಪರೀಕ್ಷೆಯ ಹೆಚ್ಚಳದ ಹೊರತಾಗಿ ಮಧ್ಯಂತರ ಮಳೆಯು ಕೀಟಗಳ ಹೊರಾಂಗಣ ಸಂತಾನೋತ್ಪತ್ತಿಗೆ ಕಾರಣವಾಗಿದೆ. ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ಕೇಂದ್ರದ (ವಿಬಿಡಿ) ನಿರ್ದೇಶನದಂತೆ ರಾಜ್ಯದಲ್ಲಿ ಸೊಳ್ಳೆ ನಿಯಂತ್ರಣ ವಿಧಾನಗಳ ಅನುಷ್ಠಾನದ ಮೂಲಕ ಡೆಂಗ್ಯೂ ಪ್ರಕರಣಗಳ ಚಿಕಿತ್ಸೆ ಮತ್ತು ನಿರ್ವಹಣೆಯನ್ನು ಮಾಡಲಾಗುತ್ತಿದೆ ಎಂದು ರಂದೀಪ್ ಹೇಳಿದರು. 

   ಒಳಾಂಗಣ ಮತ್ತು ಹೊರಾಂಗಣದಲ್ಲಿ ಸೊಳ್ಳೆ ಸಂತಾನೋತ್ಪತ್ತಿ ಮಾಡುವ ಸ್ಥಳಗಳಲ್ಲಿ ನಿಯಮಿತ ತಪಾಸಣೆ ಮಾಡಬೇಕು. ಜಲಮೂಲಗಳಿಗೆ ನಿಯಮಿತವಾಗಿ ರಾಸಾಯನಿಕವನ್ನು ಸಿಂಪಡಿಸುವಿಕೆ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಜಿಲ್ಲೆಗಳಿಗೆ ಅಗತ್ಯ ಮಾರ್ಗಸೂಚಿಗಳನ್ನು ನೀಡಲಾಗುತ್ತಿದೆ ಮತ್ತು ಡೆಂಗ್ಯೂ ಹರಡುವಿಕೆಯನ್ನು ನಿಯಂತ್ರಣದಲ್ಲಿಡಲು ಸಂಘಟಿತ ಪ್ರಯತ್ನಗಳನ್ನು ಮಾಡಲಾಗುತ್ತಿದೆ” ಎಂದು ಅವರು ತಿಳಿಸಿದರು.

    ನಾಗರಿಕರು ಮನೆಯಲ್ಲಿ ನೀರಿನ ಸಂಗ್ರಹಣೆ ಪಾತ್ರೆಗಳನ್ನು ನಿಯಮಿತವಾಗಿ ಪರಿಶೀಲಿಸುವ ಮೂಲಕ ಆರೋಗ್ಯ ಅಧಿಕಾರಿಗಳೊಂದಿಗೆ ಸಹಕರಿಸಬೇಕು ಮತ್ತು ಸೊಳ್ಳೆಗಳ ಸಂತಾನೋತ್ಪತ್ತಿಯನ್ನು ತಡೆಯಲು ಸರಿಯಾಗಿ ಘನ ತ್ಯಾಜ್ಯ ವಿಲೇವಾರಿ ಮಾಡಬೇಕು ಎಂದು ಅವರು ಸೂಚಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap