KSRTC : ನಿರ್ವಾಹಕರಿಗೆ ಇಲಾಖೆಯಿಂದ ಖಡಕ್‌ ಸೂಚನೆ…!

ಬೆಂಗಳೂರು:

     ಶಕ್ಕಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಾರಿಗೆ ನಿಗಮ ಪ್ರಯತ್ನಿಸುತ್ತಿದೆ. ಕೆಲವೊಮ್ಮೆ ಅಹಿತಕರ ಘಟನೆಗಳು ನಡೆಯುತ್ತಿವೆ. ಹೀಗಾಗಿ ಮಹಿಳೆಯರೊಂದಿಗೆ ಚಾಲಕರು, ನಿರ್ವಾಹಕರು ಸೌಜನ್ಯದಿಂದ ವರ್ತಿಸುವಂತೆ ಖಡಕ್ ಆದೇಶವನ್ನು ಕೆ ಎಸ್ ಆರ್ ಟಿ ಸಿ ಮಾಡಿದೆ.

    ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು, ಕರ್ನಾಟಕ ಸರ್ಕಾರವು ರಾಜ್ಯದ ಸಮಸ್ತ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಪುಯಾಣಿಸುವ ಸೌಲಭ್ಯವಾದ ಯೋಜನೆಯನ್ನು ವಾಹನಗಳಲ್ಲಿ ಉಚಿತವಾಗಿ ‘ಶಕ್ತಿ’ ದಿನಾಂಕ: 11-06-2023 ರಿಂದ ಜಾರಿಗೆ ತಂದಿರುತ್ತದೆ. ‘ಶಕ್ತಿ’ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ನಮ್ಮ ಚಾಲನಾ ಸಿಬ್ಬಂದಿಗಳ ಪರಿಶ್ರಮವು ಹೆಚ್ಚಿನ ಮಟ್ಟದಲ್ಲಿರುತ್ತದೆ. ಆದರೆ ಕೆಲವೊಂದು ಅಹಿತಕರ ಘಟನೆಗಳು ಈ ಮಹತ್ವದ ಯೋಜನೆಯ ಬಗ್ಗೆ ಭಿನ್ನಾಭಿಪ್ರಾಯಗಳು ಮೂಡುವಂತೆ ಮಾಡುತ್ತಿದೆ ಎಂದಿದ್ದಾರೆ.

    ಉಲ್ಲೇಖಿತ ಸಾಮಾನ್ಯ ಸ್ಥಾಯಿ ಆದೇಶದಲ್ಲಿ ಚಾಲನಾ ಸಿಬ್ಬಂದಿಗಳು ನಿಗಮದ ಸಾರಿಗೆಗಳಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸುವುದು ಹಾಗೂ ಈ ಬಗ್ಗೆ ಮಹಿಳಾ ಪ್ರಯಾಣಿಕರಿಂದ ಯಾವುದೇ ದೂರುಗಳಿಗೆ ಅವಕಾಶ ನೀಡದಂತೆ ಕರ್ತವ್ಯ ನಿರ್ವಹಿಸುವುದು. ತಪ್ಪಿದಲ್ಲಿ ಈ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು’ ಎಂದು ತಿಳಿಸಲಾಗಿರುತ್ತದೆ ಎಂದು ಹೇಳಿದ್ದಾರೆ.

    ಅದಾಗ್ಯೂ ಸಹ ಮಹಿಳೆಯರು ಇರುವ ಬಸ್ ನಿಲ್ದಾಣ/ಬಸ್ ನಿಲುಗಡೆ ಸ್ಥಳಗಳಲ್ಲಿ ಬಸ್ ನಿಲ್ಲಿಸದೇ ಇರುವುದು/ಮಹಿಳಾ ಪ್ರಯಾಣಿಕರಿಗೆ ಉಚಿತವಾಗಿ ಪುಯಾಣಿಸುವ ಬಗ್ಗೆ ಅಪಹಾಸ್ಯ ಮಾಡುವುದು ಹಾಗೂ ಇನ್ನಿತರ ರೀತಿಯಲ್ಲಿ ಮಹಿಳೆಯರೊಂದಿಗೆ ಅಗೌರವದಿಂದ ನಡೆದುಕೊಳ್ಳುತ್ತಿರುವ ಪ್ರಕರಣಗಳ ಬಗ್ಗೆ ಸಾಮಾಜಿಕ ಜಾಲತಾಣ/ಮಾಧ್ಯಮಗಳಲ್ಲಿ ವರದಿಗಳು ಪ್ರಸಾರವಾಗುತ್ತಿರುವುದನ್ನು ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ತಿಳಿಸಿದ್ದಾರೆ.

    ಮಹಿಳೆಯರಿಗೆ ವಿತರಿಸುವ ಟಿಕೇಟ್ ಮೊತ್ತವನ್ನು ಸಾರಿಗೆ ಆದಾಯವೆಂದು ಪರಿಗಣಿಸಲಾಗುತ್ತಿರುವ ಹಿನ್ನೆಲೆಯಲ್ಲಿ ನಿಗಮದ ಚಾಲಕ ಮತ್ತು ನಿರ್ವಾಹಕರುಗಳು ನಿಗದಿತ ಎಲ್ಲಾ ಬಸ್ ನಿಲ್ದಾಣ/ಬಸ್ ನಿಲುಗಡ ಸ್ಥಳಗಳಲ್ಲಿ ನಿಲುಗಡ ನೀಡಿ, ಪ್ರಯಾಣಿಕರನ್ನು ವಿಶೇಷವಾಗಿ ಮಹಿಳೆಯರು/ವಿದ್ಯಾರ್ಥಿಗಳನ್ನು ಹತ್ತಿಸಿ/ಇಳಿಸುವುದು ಹಾಗೂ ಸದರಿ ಪ್ರಯಾಣಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸುವುದು. ಇನ್ನು ಮುಂದ, ಮಹಿಳಾ ಪ್ರಯಾಣಿಕರೊಂದಿಗೆ ಯಾವುದೇ ರೀತಿಯಲ್ಲಿ ಅಗೌರವದಿಂದ ನಡೆದುಕೊಳ್ಳುವ ಪ್ರಕರಣಗಳು ವರದಿಯಾದಲ್ಲಿ, ಸಂಬಂಧಪಟ್ಟ ಚಾಲಕ ಮತ್ತು ನಿರ್ವಾಹಕರ ಮೇಲೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವುದು ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ.

    ಚಾಲನಾ ಸಿಬ್ಬಂದಿಗಳು ‘ಶಕ್ತಿ’ ಯೋಜನೆಯ ಪರಿಣಾಮಕಾರಿ ಯಶಸ್ವಿ ಅನುಷ್ಠಾನಕ್ಕೆ ಸಹಕರಿಸುವ ಆಶಯವನ್ನು ನಿಗಮವು ಹೊಂದಿದೆ. ಈ ಸುತ್ತೋಲೆಯಲ್ಲಿರುವ ಅಂಶಗಳ ಬಗ್ಗೆ ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ಅಗತ್ಯ ತಿಳುವಳಿಕೆಯನ್ನು ನೀಡುವುದು ಹಾಗೂ ಕೈಗೊಂಡ ಕ್ರಮದ ಬಗ್ಗೆ ಅನುಸರಣಾ ವರದಿಯನ್ನು ಸಲ್ಲಿಸುವಂತೆ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap