ವಕ್ಫ್ ವಿವಾದ: ಸ್ಪೀಕರಗೆ ವಿಸ್ತೃತ ವರದಿ ನೀಡಲಾಗುವುದು

ಹುಬ್ಬಳ್ಳಿ:

   ವಕ್ಫ್ ಬೋಡ್೯ ಆಸ್ತಿ ಕಬಳಿಸುವ ಆರೋಪ ಕೇಳಿಬಂದ ಹಿನ್ನೆಲೆ ಕರ್ನಾಟಕ ಜನರ ಸಮಸ್ಯೆಗಳ ಆಲಿಸಿ ಇದರ ವಿಸ್ತೃತ ವರದಿ ಸಿದ್ಧ ಪಡಿಸಿ ಸ್ಪೀಕರಗೆ ನೀಡಲಾಗುವುದು ಎಂದು ವಕ್ಫ್ ಬೋಡ್೯ ಸಂಸದೀಯ ಜಂಟಿ ಸಮಿತಿಯ ಅಧ್ಯಕ್ಷ ಜಗದಂಬಿಕಾ ಪಾಲ ತಿಳಿಸಿದರು.ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ತೇಜಸ್ವಿ ಸೂರ್ಯ ಅವರು ಕರ್ನಾಟಕದ ರೈತರು ಹಾಗೂ ಜನಸಾಮಾನ್ಯರ ಆಸ್ತಿಗಳನ್ನು ಕಬಳಿಕೆ ಮಾಡಿದ್ದಾರೆ ತಿಳಿಸಿದ್ದಾರೆ. ಆದ್ದರಿಂದ ಅಹವಾಲು ಸ್ವೀಕರಿಸಲು ಬಂದಿದ್ದೇನೆ ಎಂದರು.

   ಉತ್ತರ ಕರ್ನಾಟಕ ಭಾಗದ ಸುಮಾರು ೫೦-೬೦ ವರ್ಷಗಳಿಂದ ಉಳಿಮೆ‌ ಮಾಡಿದ ಜಮೀನು, ಐತಿಹಾಸಿ ದೇವಸ್ಥಾನಗಳ ಕಂಬಳಿಸಲಾಗಿದೆ‌ ಎನ್ನಲಾಗುತ್ತಿದೆ. ಆದ್ದರಿಂದ ಹುಬ್ಬಳ್ಳಿ, ವಿಜಯಪುರ, ಬೀದರ್ ರೈತರ ಹಾಗೂ ಜನರ ಅಹವಾಲು ಸ್ವೀಕರಿಸುತ್ತೇನೆ. ಸದ್ಯ ಹುಬ್ಬಳ್ಳಿಯಲ್ಲಿ ಅದ್ವೈತ್ ಪರಿಷತ ಉತ್ತರ ಕರ್ನಾಟಕ ಹಾಗೂ ರತ್ನ ಭಾರತ ರೈತ ಸಮಾಜದವರು ಮನವಿ ಸಲ್ಲಿಸಿದ್ದು, ಇದನ್ನು ಪರಿಗಣಿಸಲಾಗುವುದು ಎಂದು ತಿಳಿಸಿದರು.

Recent Articles

spot_img

Related Stories

Share via
Copy link