ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಬೆಂಗಳೂರು:

     ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ  ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗಾಗಿ ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಚಿಕಿತ್ಸೆ ಮುಂದುವರಿಸಿದ್ದು, ಸದ್ಯ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ. ದೇವೇಗೌಡರ ಆರೋಗ್ಯದ ಬಗ್ಗೆ ಶೀಘ್ರದಲ್ಲಿಯೇ ಕುಟುಂಬ ಅಥವಾ ಆಸ್ಪತ್ರೆಯಿಂದ ಅಧಿಕೃತ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

    ಕಳೆದ ವರ್ಷ ಫೆಬ್ರವರಿಯಲ್ಲಿ ತೀವ್ರ ಜ್ವರ, ಕೆಮ್ಮು ಮತ್ತು ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಇದೇ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಎಚ್‌ಡಿ ದೇವೇಗೌಡ ಅವರಿಗೆ 92 ವಯಸ್ಸಾಗಿದ್ದು, ವಯೋಸಹಜ ಆರೋಗ್ಯ ಸಮಸ್ಯೆ ಎದುರಾಗಿದೆ. ಇಳಿಯಸ್ಸಿನಲ್ಲೂ ದೊಡ್ಡಗೌಡರು ಸಕ್ರಿಯ ರಾಜಕಾರಣದಲ್ಲಿದ್ದು, ರಾಜ್ಯಸಭೆ ಸದಸ್ಯರಾಗಿದ್ದಾರೆ. ಇತ್ತೀಚೆಗೆ ಹಾಸನದ ಗಣೇಶ ಮೆರವಣಿಗೆ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ದೇವೇಗೌಡ ಭೇಟಿಯಾಗಿದ್ದರು.

Recent Articles

spot_img

Related Stories

Share via
Copy link