ಪ್ರಜ್ವಲ್‌ ಕೇಸ್‌ : ಅಖಾಡಕ್ಕೆ ದೇವೇಗೌಡರ ಎಂಟ್ರಿ …!

ಬೆಂಗಳೂರು: 

   ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ದೇಶ ಬಿಟ್ಟು ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಭಾರತಕ್ಕೆ ವಾಪಸ್ ಆಗುವಂತೆ ಹಲವು ಬಾರಿ ಸೂಚಿಸಿದರು ಪ್ರಯೋಜನವಾಗಿಲ್ಲ. ಆದರೆ ಇದೀಗ ಅಖಾಡಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಇಳಿದಿದ್ದು ಎಲ್ಲೇ ಇದ್ದರೂ ಕೂಡಲೇ ಭಾರತಕ್ಕೆ ಮರಳುವಂತೆ ಎಚ್ಚರಿಕೆ ನೀಡಿದ್ದಾರೆ.

   ಈ ಬಗ್ಗೆ ಜೆಡಿಎಸ್ ನ ಅಧಿಕೃತ ಪ್ರಕಟಣೆ ಹೊರಡಿಸಿರುವ ದೇವೇಗೌಡ ಅವರು, ಜನರು ನನ್ನ ಮತ್ತು ನನ್ನ ಕುಟುಂಬದರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಹಗರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು. ಅದರೂ ನಾನು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ. 

   ಇತ್ತೀಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ಪ್ರೇಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ. 

   ಇರಲಿ ಸದ್ಯಕ್ಕೆ ನಾನು ಏನು ಮಾಡಬಹುದು ಎಂದರೆ ಪ್ರಜ್ವಲ್ ಎಲ್ಲಿದ್ದರೂ ಬಂದು, ಪೊಲೀಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸು ಎಂದು ಮುಲಾಜಿಲ್ಲದೆ ಹೇಳಬಲ್ಲೆ. ಇದು ಅವನಿಗೆ ಕೊಡುತ್ತಿರುವ ಎಚ್ಚರಿಕೆ.

   ನೀನು ಮಾಡಿದ್ದೀಯ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ನೀನು ತಲೆಬಾಗದಿದ್ದಲ್ಲಿ ನೀನು ನನ್ನ ಮೊಮ್ಮಗನೇ ಅಲ್ಲ ಎಂದು ಭಾವಿಸಬೇಕಾಗುತ್ತದೆ. ನನ್ನ ಬಗ್ಗೆ ಗೌರವವಿದ್ದರೆ ಕೂಡಲೇ ಬಂದು ಪೊಲೀಸರಿಗೆ ಶರಣಾಗು ಎಂದು ಎಚ್ಚರಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap