14 ದಿನ ನ್ಯಾಯಾಂಗ ಬಂಧನಕ್ಕೆ ವಕೀಲ ದೇವರಾಜೇಗೌಡ …..!

ಬೆಂಗಳೂರು: 

   ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಬಿಜೆಪಿ ನಾಯಕ ಮತ್ತು ವಕೀಲ ಜೆ. ದೇವರಾಜೇಗೌಡ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಶನಿವಾರ ಒಪ್ಪಿಸಲಾಗಿದೆ. ಶುಕ್ರವಾರ ತಡರಾತ್ರಿ ಚಿತ್ರದುರ್ಗ ಜಿಲ್ಲೆಯ ಗೂಳಿಹಾಲ್ ಟೋಲ್ ಗೇಟ್ ಬಳಿ ಅವರನ್ನು ಹಿರಿಯೂರು ಪೊಲೀಸರು ಬಂಧಿಸಿದ್ದರು. ನಂತರ ಹಾಸನ ಜಿಲ್ಲೆ ಹೊಳೆನರಸೀಪುರ ಪೊಲೀಸರು ಅಲ್ಲಿಗೆ ತೆರಳಿ ದೇವರಾಜೇಗೌಡ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.

    ಶನಿವಾರ ಬೆಳಗ್ಗೆ ಅವರನ್ನು ವಿಚಾರಣೆಗಾಗಿ ಅತ್ಯಾಚಾರ ಘಟನೆ ನಡೆದಿದೆ ಎನ್ನಲಾದ ಹಾಸನ ಜಿಲ್ಲೆಯ ಹೊಳೆನರಸೀಪುರಕ್ಕೆ ಕರೆದೊಯ್ಯಲಾಯಿತು. ನಂತರ ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

    ಹಾಸನ ಜಿಲ್ಲೆಯ 36 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ದೇವರಾಜೇಗೌಡ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆಸ್ತಿ ಮಾರಾಟ ಮಾಡಲು ಸಹಾಯ ಮಾಡುವ ನೆಪದಲ್ಲಿ ತನಗೆ ಕಿರುಕುಳ ನೀಡಿ ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಏಪ್ರಿಲ್ 1 ರಂದು ಅವರ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಶುಕ್ರವಾರ, ಮಹಿಳೆ ಮತ್ತೊಮ್ಮೆ ಪೊಲೀಸರನ್ನು ಸಂಪರ್ಕಿಸಿದ್ದು, ಅವರಿಂದ ಅತ್ಯಾಚಾರವೆಸಗಿರುವುದಾಗಿ ಆರೋಪಿಸಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

      ದೇವರಾಜೇಗೌಡ ಅವರು 2023 ರ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಲ್ಲಿ ಹೆಚ್. ಡಿ. ರೇವಣ್ಣ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡಿದ್ದರು. ಕಳೆದ ವರ್ಷ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣವನ್ನು ಮೊದಲ ಬಾರಿಗೆ ಹೊರಗೆ ತಂದು, ಅವರಿಗೆ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡದಂತೆ ಕೇಂದ್ರದ ಬಿಜೆಪಿ ನಾಯಕರಿಗೆ ಪತ್ರ ಬರೆದಿರುವುದಾಗಿ ಅವರು ಹೇಳಿಕೊಂಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap