ಗದಗ :
ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಮತ್ತು ಕುಟುಂಬದವರ ಹೆಸರಿಗೆ ಕಳಂಕ ತರುವ ಹಾಗೂ ಕೋಟ್ಯಾಂತರ ಭಕ್ತರ ಭಾವನೆಗೆ ಧಕ್ಕೆ ತರುತ್ತಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶ್ರೀ ಧರ್ಮಸ್ಥಳ ಅಭಿಮಾನಿಗಳ ವೇದಿಕೆಯ ನೇತೃತ್ವದಲ್ಲಿ ವಿವಿದ ಸಂಘಟನೆಗಳ ಸಾವಿರಾರು ಸದಸ್ಯರುಗಳು ಬುಧವಾರ ನಗರದ ಅಂಬೇಡ್ಕರ ಭವನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಶಿವಪ್ರಕಾಶ ಮಹಾಜನಶೆಟ್ಟರ ಅವರು ಮಾತನಾಡಿ,
ಪ್ರಸಿದ್ಧ ಧಾರ್ಮಿಕ ಕೇಂದ್ರ ಧರ್ಮಸ್ಥಳದ ಶ್ರೀಮಂಜುನಾಥ ಸ್ವಾಮಿ ದೇವಾಲಯವು ಸರಿ ಸುಮಾರು ಶತಮಾನಗಳ ಇತಿಹಾಸ ಹೊಂದಿದ ಪುಣ್ಯಕ್ಷೇತ್ರ. ಶ್ರೀ ಕ್ಷೇತ್ರದ ಆರಾಧ್ಯ ದೈವ ಮಂಜುನಾಥ ಸ್ವಾಮಿಯು ನಮ್ಮ ನಂಬಿಕೆ ಹಾಗೂ ತಲೆತಲಾಂತರುಗಳಿAದ ನಮ್ಮ ಭಕ್ತಿ ಹಾಗೂ ಸೇವೆಯನ್ನು ಶ್ರೀ ಮಂಜುನಾಥ ಸ್ವಾಮಿಗೆ ಸಲ್ಲಿಸುತ್ತಾ ಬಂದಿರುತ್ತೇವೆ.
ಈ ಕ್ಷೇತ್ರಕ್ಕೆ ಪ್ರತಿದಿನ ರಾಜ್ಯ ಹಾಗೂ ಹೊರರಾಜ್ಯದಿಂದ ದರ್ಶನಾರ್ಥಿಗಳಾಗಿ ಲಕ್ಷಗಟ್ಟಲೆ ಜನರು ಆಗಮಿಸಿ, ಶ್ರೀ ಸ್ವಾಮಿಯ ದರ್ಶನ ಪಡೆದು ಅನ್ನಪ್ರಸಾದ ಸೇವಿಸಿ ಕೃತಾರ್ಥರಾಗಿರುತ್ತಾರೆ. ಅಲ್ಲದೇ, ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದೇವಾಲಯವು ಹಿಂದೂಗಳ ಪವಿತ್ರ ಶ್ರದ್ಧಾ ಕೇಂದ್ರವಾಗಿರುತ್ತದೆ. ಈ ಕ್ಷೇತ್ರದಲ್ಲಿ ಯಾವುದೇ ಜಾತಿ, ಮತ, ಧರ್ಮ ಭೇದವಿಲ್ಲದೇ ಎಲ್ಲರನ್ನೂ ಸಮನಾಗಿ ಕಾಣುವ ಪುಣ್ಯ ಕ್ಷೇತ್ರವಾಗಿರುತ್ತದೆ. ಇಂತಹ ಪುಣ್ಯಕ್ಷೇತ್ರದ ಬಗ್ಗೆ ಗಿರೀಶ ಮಟ್ಟೆಣ್ಣವರ, ಮಹೇಶಶೆಟ್ಟಿ ತಿಮ್ಮರೋಡಿ, ಸಂತೋಷ ಕಡಬ, ಸಮೀರ್ ಎಂ. ಡಿ. ಕುಡ್ಲ ರಾಂಪೇಜ್, ಜಯಂತ ಟಿ. ಇವರುಗಳು ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಧರ್ಮಾಧಿಕಾರಿಗಳಾದಂತಹ ಡಾ. ಶ್ರೀ ಡಿ.ವೀರೇಂದ್ರ ಹೆಗ್ಗಡೆ ಇವರಿಗೆ ಕಳಂಕ ತರುವ ಉದ್ದೇಶದಿಂದಲೇ ವಿಡಿಯೋಗಳನ್ನು ಮಾಡಿ ಅದರಲ್ಲಿ ಧರ್ಮಸ್ಥಳಕ್ಕೆ, ಕ್ಷೇತ್ರದ ಆರಾಧ್ಯ ದೇವರಿಗೆ, ಪೂಜ್ಯರಿಗೆ ಕೆಟ್ಟ ರೀತಿಯಲ್ಲಿ ಕೀಳು ಮಟ್ಟದ ಭಾಷೆಗಳಲ್ಲಿ, ಅಸಹ್ಯವೆನಿಸುವ ರೀತಿಯಲ್ಲಿ ಚಿತ್ರೀಕರಿಸಿ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಡುತ್ತಿದ್ದಾರೆ.
ಅವರ ಸುಳ್ಳು ಆರೋಪಗಳಿಂದ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಭಕ್ತರುಗಳಾದ ನಮಗೆ ಈ ರೀತಿಯ ಅವಮಾನಗಳನ್ನು ನೋಡಿಕೊಂಡು ಸಹಿಸಲು ಸಾಧ್ಯವಾಗುತ್ತಿಲ್ಲ. ಸಾಮಾಜಿಕ ಮಾಧ್ಯಮದಲ್ಲಿ ಆಧಾರ ರಹಿತ ಸುಳ್ಳು ಸುದ್ದಿ ಹಬ್ಬಿಸಿ ಧರ್ಮ ನಿಂದನೆ ಮಾಡಿ ಧರ್ಮ ಧರ್ಮಗಳ ನಡುವೆ ಕಂದಕವನ್ನು ಸೃಷ್ಟಿಸುತ್ತಿದ್ದಾರೆ. ಇದರಿಂದ ಭವಿಷ್ಯದಲ್ಲಿ ಶಾಂತಿಭಂಗ ಉಂಟಾಗಿ ಆರಾಜಕತೆ ಭುಗಿಲೇಳುವ ಸಾಧ್ಯತೆ ಇದೆ ಇರುವದರಿಂದ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶಿವಾನಂದ ಬೆಂತೂರ ಅವರು ಮಾತನಾಡಿ, ಮಾನ್ಯ ಉಚ್ಚ ನ್ಯಾಯಾಲಯವು ಸಾಮಾಜಿಕ ಮಾಧ್ಯಮಗಳಲ್ಲಿ ಕ್ಷೇತ್ರದ ಬಗ್ಗೆ ಹಾಗೂ ಡಾ. ಡಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಬಾರದೆಂದು ಆದೇಶ ಮಾಡಿ ಮಾನ್ಯ ಉಚ್ಚ ನ್ಯಾಯಾಲಯದ ಆದೇಶವನ್ನು ಧಿಕ್ಕರಿಸುತ್ತಿರುವ ಇವರ ಮೇಲೆ ಸರಕಾರವು ತತ್ಕ್ಷಣ ಕ್ರಮ ಕೈಗೊಳ್ಳಬೇಕು.
ಅಲ್ಲದೆ, ಅನಾಮಿಕ ವ್ಯಕ್ತಿಯು ನೀಡಿದ ದೂರಿನ ಆಧಾರದಲ್ಲಿ ಕರ್ನಾಟಕದ ಘನ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿ ಅದರ ಮೂಲಕ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವುದನ್ನು ಕ್ಷೇತ್ರದ ಭಕ್ತರಾದ ನಾವು ಗೌರವದಿಂದ ಸ್ವಾಗತಿಸುತ್ತಿದ್ದೇವೆ. ಆದರೆ ಈ ತನಿಖೆಯು ಗೊತ್ತು ಗುರಿ ಇಲ್ಲದೆ ಹೋಗಬಾರದು ಎಂದು ಆಗ್ರಹಿಸುತ್ತೇವೆ ಹಾಗೂ ಈ ತನಿಖೆಯನ್ನು ನಿಗದಿತ ಸಮಯದಲ್ಲಿ ಮುಗಿಸಿ ವರದಿಯನ್ನು ಪಡೆದು ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಬೇಕು.
ಅನಾಮಿಕ ದೂರುದಾರ ಮತ್ತು ಆತನ ಹಿಂದೆ ಇರುವ ಗಿರೀಶ ಮಟ್ಟೆನ್ನವರ, ಮಹೇಶ ಶೆಟ್ಟಿ ತಿಮರೋಡಿ, ಸಂತೋಷ ಕಡಬ, ಸಮೀರ್ ಎಂ. ಡಿ., ಕುಡ್ಲ ರಾಂಪೇಜ್, ಜಯಂತ ಟಿ. ಇವರ ಹಿನ್ನೆಲೆ ಇವರಿಗೆ ಯಾರಿಂದ ಧನಸಹಾಯವಾಗುತ್ತಿದೆ ಹಾಗೂ ಸುಳ್ಳು ಆರೋಪ ಮಾಡಲು ಇವರಿಗೆ ಯಾರು ಪ್ರಚೋದನೆ ಮಾಡುತ್ತಿದ್ದಾರೆ ಮತ್ತು ಇವರ ಬ್ಯಾಂಕ್ ಖಾತೆಗಳನ್ನು ತನಿಖೆಗೊಳಪಡಿಸಬೇಕು ಅಲ್ಲದೇ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಹತ್ತಿರ ಅಂದರೆ ಮೊಬೈಲ್ದಲ್ಲಿ ಸಾಕ್ಷಾಧಾರಗಳು ಇವೆ ಎಂದು ಘಂಟಾಘೋಷವಾಗಿ ಸಾರುತ್ತಿರುವ ಗಿರೀಶ ಮಟ್ಟೆಣ್ಣವರ ಹಾಗೂ ಇತರರು ವಿರುದ್ಧದ ತನಿಖೆಯಾಗಬೇಕು. ಈ ವ್ಯಕ್ತಿಗಳ ಹಿಂದೆ ಕಾಣದ ಕೈಗಳು ಯಾರು ಇದ್ದಾರೆ ಅಂತ ತನಿಖೆ ಕೈಗೊಳ್ಳುವ ಅವಶ್ಯಕತೆ ಇರುತ್ತದೆ. ಇವರ ಮೊಬೈಲ್ಗಳನ್ನು ಹಾಗೂ ಇವರ ಮನೆ ಹಾಗೂ ಕಚೇರಿಗಳನ್ನು ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.
ನೇತೃತ್ವ ವಹಿಸಿದ್ದ ಜನಜಾಗೃತಿ ವೇಧಿಕೆಯ ಉಪಾಧ್ಯಕ್ಷರಾದ ಚಂದ್ರಶೇಖರ ಹುಣಸಿಕಟ್ಟಿ ಅವರು ಮಾತನಾಡಿ, ಈ ಪ್ರತಿಭಟನೆಯಿಂದ ಧರ್ಮಯುದ್ದ ಆರಂಭವಾಗಿದೆ ನಾವೇಲ್ಲರೂ ಶ್ರೀಕ್ಷೇತ್ರ ಧರ್ಮಸ್ಥಳ ಪರವಾಗಿ ನಿಲ್ಲುತ್ತೆವೆ. ಮುಂದಿನ ದಿನಗಳಲ್ಲಿ ನ್ಯಾಯಕ್ಕೆ ಜಯ ಸಿಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಕ್ಕಣ್ಣೇಶ್ವರ ಶ್ರೀಮಠದ ಪೂಜ್ಯಶ್ರೀ ಶಂಕರನಾAದ ಶ್ರೀಗಳು, ಗದಗ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರುಗಳು, ದಿಗಂಬರ ಜೈನ ಸಮಾಜ, ನವಜೀವನ ಸಮೀತಿ ಸದಸ್ಯರು,ಕರ್ನಾಟಕ ರಕ್ಷಣಾ ವೇದಿಕೆ, ಅಟೋ ಚಾಲಕರ ಸಂಘ, ಹುಯಿಲಗೋಳ ಗ್ರಾಮ ಪಂಚಾಯತಿಯ ಸರ್ವ ಸದಸ್ಯರುಗಳು, ಹಾಗೂ ಜಿಲ್ಲೆಯ ಎಲ್ಲ ತಾಲ್ಲೂಕಿನ ಪ್ರಗತಿ ಬಂದು, ಸ್ವಸಹಾಯ ಸಂಘದ ಸದಸ್ಯರುಗಳು ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು.
