ತುರುವೇಕೆರೆ:
ಸರ್ಕಾರದ ಮಟ್ಟದ ವಿವಿಧ ಇಲಾಖೆಗಳ ಅನುದಾನಗಳನ್ನು ಪ್ರಾಮಾಣಿಕವಾಗಿ ಜನಸಾಮಾನ್ಯರಿಗೆ ಮುಟ್ಟಿಸುವಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಸಂಸ್ಥೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ.ಎ.ಹೆಚ್.ಮಂಜುನಾಥ್ ಅವರು ತಿಳಿಸಿದರು.
ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿ ಶ್ರೀ ಕ್ಷೇತ್ರ ಗ್ರಾಮಾಭಿವೃದ್ದಿ ಯೋಜನೆ, ಬಿ.ಸಿ.ಟ್ರಸ್ಟ್ ಗ್ರಾಮಾಂತರ ಯೋಜನೆಯ 2ನೇ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಶ್ರೀ.ಧ.ಗ್ರಾ.ಯೋ.ಸಂಸ್ಥೆಯು ಪ್ರಾರಂಭವಾಗಿ 11 ವರ್ಷಗಳು ಸಂದಿದ್ದು, ಈ ಅವಧಿಯಲ್ಲಿ ಅನೇಕ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕೆರೆಗಳ ಪುನಚ್ಚೇತನ, ಗೃಹ ನಿರ್ಮಾಣ, ಹೈನುಗಾರಿಕೆ, ಕೃಷಿ, ಪ್ರಗತಿನಿಧಿ, ಮದ್ಯವರ್ಜನದಂತಹ ಹಲವಾರು ಯೋಜನೆಗಳ ಮೂಲಕ ನಮ್ಮ ಸಂಘ ಬಡವರಿಗೆ ಆಸರೆಯಾಗುವ ಮೂಲಕ ರಾಜ್ಯದಲ್ಲಿ ಪ್ರಗತಿ ಸಾಧಿಸಿದೆ ಎಂದರು.
ಈ ಸಂಧರ್ಭದಲ್ಲಿ ಪಪಂ ಅಧ್ಯಕ್ಷ ಅಂಜನ್‍ಕುಮಾರ್, ಉಪಾಧ್ಯಕ್ಷೆ ಬಾಗ್ಯಮ್ಮ, ಪ್ರಾದೇಶಿಕ ನಿರ್ದೇಶಕ ಸೀನಪ್ಪ ಬೆಂಗಳೂರು, ಜಿಲ್ಲಾ ನಿರ್ದೇಶಕರಾದ ದಯಾಶೀಲ, ಯೋಜನಾಧಿಕಾರಿ ಯಶೋಧರ, ಅನಿತಾಶೆಟ್ಟಿ, ಮಾಧವಗೌಡ ಸೇರಿದಂತೆ ಹಲವು ಪದಾಧಿಕಾರಿಗಳು ಹಾಗೂ ಅನೇಕ ಮಹಿಳಾ ಸೇವಾ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಸ್ಥಳೀಯ ಮಹಿಳೆಯರಿಗೆ ಅವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ, ತುಮಕೂರು ಜಿಲ್ಲೆಯ 15 ಸಾವಿರ ಮಹಿಳೆಯರನ್ನು ಆಯಾ ತಾಲ್ಲೂಕಿನ ಸೇವಾ ಪ್ರತಿನಿಧಿಗಳಾಗಿ ಆಯ್ಕೆ ಮಾಡುವ ಮೂಲಕ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅದರಲ್ಲಿ ತುರುವೇಕೆರೆ ತಾಲ್ಲೂಕು 100ಕ್ಕೆ 100ರಷ್ಟು ಪ್ರಗತಿ ಸಾಧಿಸುವ ಮೂಲಕ ಪ್ರಥಮ ಸ್ಥಾನದಲ್ಲಿರುವುದಕ್ಕೆ ಅಭಿನಂದಿಸುತ್ತೇನೆ. ಜಿಲ್ಲೆಯಲ್ಲಿ ತೆಂಗು ಹೆಚ್ಚು ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ತೆಂಗು ನಾರಿನ ಉದ್ದಿಮೆಗೆ ಆದ್ಯತೆ ನೀಡುವುದು.
-ಡಾ.ಎ.ಹೆಚ್.ಮಂಜುನಾಥ್, ಮುಖ್ಯ ಕಾರ್ಯ ನಿರ್ವಾಹಕ ನಿರ್ದೇಶಕರು, ಧರ್ಮಸ್ಥಳ ಸಂಸ್ಥೆ
ಸರ್ಕಾರ ಮಾಡದ್ದನ್ನು ಹೆಗ್ಗಡೆಯವರು ಮಾಡಿದ್ದಾರೆ :
ಮಾಜಿ ಶಾಸಕರುಗಳಾದ ಎಂ.ಡಿ.ಲಕ್ಷ್ಮೀನಾರಾಯಣ್ ಮತ್ತು ಎಂ.ಟಿ.ಕೃಷ್ಣಪ್ಪ, ಹಾಗೂ ತುಮುಲ್ ಅಧ್ಯಕ್ಷ ಮಹಲಿಂಗಯ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಾ, ಶ್ರೀ.ಧ.ಗ್ರಾ.ಯೋ.ಸಂಸ್ಥೆಯು ಪ್ರಾರಂಭವಾದಂದಿನಿಂದ ಇಂದಿನವರೆವಿಗೆ ರಾಜ್ಯದಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು, ಸಂಘ ಸಂಸ್ಥೆÀಗಳ ಮುಖಾಂತರ ಹೆಣ್ಣು ಮಕ್ಕಳಿಗೆ ಅನುಕೂಲ ಕಲ್ಪಿಸುವುದರ ಜೊತೆಗೆ ಬಡ ಕುಟುಂಬಗಳಿಗೆ ಆರ್ಥಿಕವಾಗಿ ಅನುಕೂಲ ಮಾಡಿಕೊಡಲಾಗಿದೆ. ರಾಜ್ಯದಲ್ಲಿ ಸುಮಾರು 90 ಲಕ್ಷಕ್ಕೂ ಹೆಚ್ಚು ಸಂಘಗಳನ್ನು ಸ್ಥಾಪಿಸಿದ್ದು, ಯಾವುದೇ ಸರ್ಕಾರ ಮಾಡದ ಕಾರ್ಯವನ್ನು ಧರ್ಮಸ್ಥಳದ ವೀರೇಂದ್ರ ಹೆಗ್ಗೆಡೆಯವರು ಮಾಡುತ್ತಿರುವುದು ಶ್ಲಾಘನೀಯವೆಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ