ಧಾರವಾಡ :
ಧಾರವಾಡದಲ್ಲಿ ಪೊಲೀಸರು ಇಬ್ಬರು ಕಳ್ಳರನ್ನು ಗುಂಡು ಹಾರಿಸಿ ಗಾಯಗೊಳಿಸಿ ಬಂಧಿಸಿದ್ದಾರೆ. ಕಳ್ಳತನ ಮಾಡಿ, ಪಿಎಸ್‌ಐ ಮೇಲೆ ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದ ಇಬ್ಬರು ಕಳ್ಳರ ಮೇಲೆ ಫೈರಿಂಗ್ ನಡೆಸಲಾಗಿದೆ. ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆರೋಪಿಗಳಾದ ಮುಜಾಮಿಲ್ ಮತ್ತು ವಿಜಯ್ ಎಂಬವರನ್ನು ಪರಾರಿ ಆಗುವ ವೇಳೆ ಪೊಲೀಸರು ಸೆರೆ ಹಿಡಿದಿದ್ದಾರೆ.
ಧಾರವಾಡ ನಗರದಲ್ಲಿ ಗಿರಿನಗರದ ಬಡಾವಣೆಯ ಮನೆಯೊಂದರಲ್ಲಿ ಈ ಕಳ್ಳರು ಕಳ್ಳತನ ಮಾಡಿದ್ದರು. ಬಳಿಕ ಪರಾರಿ ಆಗುವ ವೇಳೆ ಪೊಲೀಸರ ಕೈಗೆ ಇಬ್ಬರು ಕಳ್ಳರು ಸಿಕ್ಕಿ ಬಿದ್ದಿದ್ದಾರೆ. ಪಿಎಸ್ಐ ಮೇಲೆ ಹಲ್ಲಿ ನಡೆಸಿ ಕಳ್ಳರು ಪರಾರಿಗೆ ಯತ್ನಿಸಿದ್ದಾರೆ. ಈ ವೇಳೆ ಪಿಎಸ್ಐ ಮಲ್ಲಿಕಾರ್ಜುನ್ ಇಬ್ಬರ ಮೇಲೂ ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿಗಳಾದ ಮುಜಾಮಿಲ್ ಮತ್ತು ವಿಜಯ್ ಕಾಲಿಗೆ ಗುಂಡೇಟು ತಗುಲಿದ್ದು, ಗಾಯಾಳುಗಳನ್ನು ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.