ಬೆಂಗಳೂರು:
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ವಿಚಾರಣೆಯನ್ನು ತೀವ್ರಗೊಳಿಸಿರುವ ಎನ್ಐಎ ಬಾಂಬರ್ ಫೋಟೋ ಬಿಡುಗಡೆ ಮಾಡಿದ್ದು ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ.
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನ NIA ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದ್ದು, ಇದೀಗ ಬಾಂಬರ್ ಫೋಟೋ ಬಿಡುಗಡೆ ಮಾಡಿದೆ. ಅಲ್ಲದೇ ಈ ಬಾಂಬರ್ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಿದೆ.
ಇದಕ್ಕೂ ಮುನ್ನ ಸಿಸಿಬಿ ನಡೆಸಿದ್ದ ತನಿಖೆ ವೇಳೆ ಬಾಂಬರ್ ಮಾಸ್ಕ್ ಹಾಕಿಕೊಳ್ಳದ ಫೋಟೋ ಪತ್ತೆಯಾಗಿತ್ತು. ಇದೀಗ ಆ ಫೋಟೋವನ್ನು ಎನ್ಐಎ ಬಿಡುಗಡೆ ಮಾಡಿದೆ. ಅಲ್ಲದೇ ಆರೋಪಿ ಬಗ್ಗೆ ತಿಳಿದರೆ ಕೂಡಲೇ 080-29510900, 8904241100 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಎನ್ಐಎ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
NIA ಅಧಿಕಾರಿಗಳು ನಿನ್ನೆ ಕೆಫೆಗೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದ್ದರು. ಕ್ಯಾಶ್ ಕೌಂಟರ್, ಸಿಸಿಕ್ಯಾಮರಾ ಪರಿಶೀಲನೆ ನಡೆಸಿ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನು ಪೊಲೀಸರು ಸಹ ಸ್ಥಳದಲ್ಲಿ ಕಲೆ ಹಾಕಿರುವ 38 ಸ್ಯಾಂಪಲ್‌ಗಳ ಮಾಹಿತಿಯನ್ನ NIA ಅಧಿಕಾರಿಗಳಿಗೆ ನೀಡಿದ್ದಾರೆ.