15ರಂದು ಬಿಜೆಪಿಯಿಂದ ವಿಶಿಷ್ಟ ರೀತಿಯಲ್ಲಿ ರಾಷ್ಟ್ರ ಧ್ವಜಾಹೋಹಣ

ಬೆಂಗಳೂರು:

     ಬಿಜೆಪಿ ವತಿಯಿಂದ ಆಗಸ್ಟ್ 15ರ ರಾಷ್ಟçಧ್ವಜಾರೋಹಣ ಕಾರ್ಯಕ್ರಮವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ತಿಳಿಸಿದರು.

    ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನ?ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದ ಎಲ್ಲ ತಾಲ್ಲೂಕು, ಗ್ರಾಮ ಪಂಚಾಯಿತಿ, ಎಲ್ಲ ಜಿಲ್ಲೆಗಳಲ್ಲಿ ನಮ್ಮ ಕಾರ್ಯಕರ್ತರು ರಾಷ್ಟçಧ್ವಜವನ್ನು ಹಾರಿಸುವ ಮೂಲಕ ದೇಶಕ್ಕಾಗಿ, ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದ ವೀರ ಯೋಧರ, ಸ್ವಾತಂತ್ರ್ಯ ಸೇನಾನಿಗಳನ್ನು ಸ್ಮರಿಸುವ ಕಾರ್ಯವನ್ನು ದೇಶ ಮತ್ತು ಕರ್ನಾಟಕದಲ್ಲಿ ಅಭೂತಪೂರ್ವವಾಗಿ ನಡೆಸಲಿದೆ ಎಂದು ಅವರು ವಿವರಿಸಿದರು.

    ಆ. 15ರಂದು ಬೆಳಿಗ್ಗೆ ಇಲ್ಲಿ ನಮ್ಮ ರಾಜ್ಯಾಧ್ಯಕ್ಷರು ಧ್ವಜಾಹೋಹಣ ಮಾಡಲಿದ್ದಾರೆ. ಸ್ವಾತಂತ್ರ್ಯ ಸೇನಾನಿಗಳ ಭಾವಚಿತ್ರಗಳಿಗೆ ಪುಷ್ಪಾರ್ಚನೆ ನೆರವೇರಲಿದ್ದಾರೆ. ಜಿಲ್ಲೆ, ಮಂಡಲಗಳಲ್ಲಿ ಶಾಸಕರು, ಸಂಸದರು, ಪದಾಧಿಕಾರಿಗಳು ಪಾಲ್ಗೊಳ್ಳುವರು ಎಂದರು.

    ಆ.14ರ ರಾತ್ರಿ ನಮ್ಮ ದೇಶಕ್ಕೆ ಸ್ವಾತಂತ್ರ್ಯದ ಖುಷಿ, ಸಂತಸದ ಜೊತೆಗೇ ಅಷ್ಟೇ ಪ್ರಮಾಣದಲ್ಲಿ ದುಃಖ ಆಗಿತ್ತು. ಭಾರತ ವಿಭಜನೆ ಮೂಲಕ ದೇಶ ಎರಡು ತುಂಡಾದ ಆ ದಿನವನ್ನು, ಭಾರತ ವಿಭಜನೆಯ ದುರಂತ ಕಥೆಯನ್ನು ತಿಳಿಸುವ ಉದ್ದೇಶದಿಂದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ವಿಭಜನೆಯ ದುರಂತ ಕಥೆ ಸಾರುವ ಪ್ರದರ್ಶಿನಿ ಆಯೋಜಿಸಲಾಗಿದೆ.

    ಬೆಂಗಳೂರಿನ ಇದೇ ಕಾರ್ಯಾಲಯದಲ್ಲಿ ಮಾಜಿ ಸಚಿವ ಆರ್.ಆಶೋಕ್ ಅವರು ಉದ್ಘಾಟಿಸುವರು. ಸಂಸದ ಪಿ.ಸಿ.ಮೋಹನ್, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಂಗಳೂರಿನ ಹಾಜಬ್ಬ ಅವರು ಭಾಗವಹಿಸುವರು ಎಂದು ತಿಳಿಸಿದರು.

    14ರ ಸಂಜೆ ಪಂಜಿನ ಮೌನ ಮೆರವಣಿಗೆ ನಡೆಸಲಾಗುವುದು. ವಿಭಜನೆಯ ಕಥನ ಕೇಳುವ ವ್ಯವಸ್ಥೆ, ಭಾಷಣ ಏರ್ಪಡಿಸಲಾಗಿದೆ ಎಂದ ಅವರು, ನಾವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿದ್ದೇವೆ. ಭಾರತದ ಒಗ್ಗೂಡಿಸುವಿಕೆ, ಪ್ರಪಂಚದಲ್ಲಿ ನಂಬರ್ ವನ್ ರಾಷ್ಟ್ರವನ್ನಾಗಿ ಮಾಡಲು ಪ್ರಧಾನಿ ನರೇಂದ್ರ ಮೋದಿಜಿ ಮತ್ತು ರಾಷ್ಟಿçÃಯ ಅಧ್ಯಕ್ಷ ಜೆ.ಪಿ. ನಡ್ಡಾರವರು ಕರೆ ನೀಡಿದ್ದಾರೆ. 6 ಲಕ್ಷ ಪಂಚಾಯಿತಿಗಳಿಂದ ಮಣ್ಣು ಸಂಗ್ರಹಿಸಿ, ಕಿತ್ತೂರು, ಮೈಸೂರು, ಬೆಂಗಳೂರು ಸೇರಿ 7,500 ಐತಿಹಾಸಿಕ ಸ್ಥಳಗಳಿಂದ ಮಣ್ಣು ಸಂಗ್ರಹಿಸಲಾಗುತ್ತದೆ.

    ಅಮೃತ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ದೆಹಲಿ ಕರ್ತವ್ಯ ಪಥದ ವಾಟಿಕಾ ಪಾರ್ಕ್ನಲ್ಲಿ ಹಾಕಿ ಉದ್ಯಾನ ನಿರ್ಮಿಸಲಾಗುತ್ತದೆ. ಆ.30ರಂದು ಪ್ರಧಾನಿಯವರು ಈ ಕಾರ್ಯಕ್ರಮ ನೆರವೇರಿಸಲಿದ್ದಾರೆ ಎಂದು ವಿವರಿಸಿದರು.

    ಮನೆ ಮನೆಯಲ್ಲೂ ತ್ರಿವರ್ಣಧ್ವಜದ (ಹರ್ ಘರ್ ತಿರಂಗ) ಮೂಲಕ ದೇಶಭಕ್ತಿಯ ಜ್ವಾಲೆ ಮೂಡಿಸುವ ಕಾರ್ಯಕ್ರಮವನ್ನು ಬಿಜೆಪಿ ಯೋಜಿಸಿದೆ. ದೇಶ, ರಾಜ್ಯದಲ್ಲಿ ಲಕ್ಷಾಂತರ ಕಾರ್ಯಕರ್ತರು ಇದರಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap