ಆಸ್ಪತ್ರೆಯಲ್ಲಿ ಸಾವು ಪ್ರತಿ ವರ್ಷ ಇದ್ದಿದ್ದೇ : ದಿನೇಶ್ ಗುಂಡೂರಾವ್

ಬೆಳಗಾವಿ

  ಬಾಣಂತಿಯರ ಮರಣಗಳು ಆಗುತ್ತಿವೆ, ಪ್ರತಿ ವರ್ಷ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ ಇದ್ದೇ ಇರುತ್ತದೆ. ಅದನ್ನೆ ಮುಂದಿಟ್ಟುಕೊಂಡು ರಾಜಕೀಯ ಉದ್ದೇಶದಿಂದ ಮಾತನಾಡಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸುವುದಕ್ಕೂ ಮುನ್ನ ಮಾತನಾಡಿದ ಅವರು, ಬಾಣಂತಿಯರ ಸಾವಿನ ವಿಚಾರವಾಗಿ ಅಧಿವೇಶನದಲ್ಲಿ ಗಂಭೀರವಾಗಿ ಚರ್ಚೆ ಆಗಬೇಕು. ಅದಕ್ಕೆ ನಾವು ಉತ್ತರ ನೀಡುತ್ತೇವೆ ಎಂದರು.

   ಬಾಣಂತಿಯರ ಸಾವಿನ ಬಗ್ಗೆ ನಿಜಾಂಶಗಳ ಬಗ್ಗೆ ನಾವು ಚರ್ಚೆ ಮಾಡುತ್ತೇವೆ. ಬಾಣಂತಿಯರ ಮರಣಗಳು ಆಗುತ್ತಿವೆ, ಅದಕ್ಕೆ ವೈದ್ಯಕೀಯ ಕಾರಣ ಎನ್ನಲಾಗದು. ಅದನ್ನೆ ಮುಂದಿಟ್ಟುಕೊಂಡು ರಾಜಕೀಯ ಉದ್ದೇಶದಿಂದ ಮಾತನಾಡಬಾರದು ಎಂದು ಅವರು ವಿರೋಧ ಪಕ್ಷಗಳ ವಿರುದ್ದ ಕಿಡಿ ಕಾರಿದರು.

   ವ್ಯವಸ್ಥೆಗಳನ್ನು ಸರಿಪಡಿಸುವ ಕೆಲಸ ಸಾಕಷ್ಟು ಆಗುತ್ತಿದೆ. ಬಾಣಂತಿಯರ ಮರಣಗಳ ಬಗ್ಗೆ ಬೆಳಗಾವಿ ಅಧಿವೇಶನಲ್ಲಿ ಉತ್ತರ ಕೊಡಲಾಗುವುದು. ಸರ್ಕಾರ ಮೇಡಿಕಲ್ ಮಾಫಿಯಾ ಹಿಡಿತಕ್ಕೆ ಸಿಲುಕಿದೆಯಾ ಎಂಬ ವಿಚಾರವಾಗಿ ಸದನದಲ್ಲಿ ನಾನು ಚರ್ಚೆ ಮಾಡುತ್ತೇನೆ ಎಂದರು. ಆರೋಗ್ಯ ಇಲಾಖೆ ಬಗ್ಗೆ ಮಾತನಾಡಬೇಕು. ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಮರಣದ ವಿಚಾರವಾಗಿ ನಮಗೆ ಬಹಳ ಚಿಂತೆ ಇದೆ. ಸರ್ಕಾರವೂ ಎಚ್ಚೆತ್ತುಕೊಂಡಿದೆ ಎಂದರು.

 
   ಗುಂಡೂರಾವ್ ಹೇಳಿಕೆಯನ್ನು ಇದೀಗ ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ಬಳ್ಳಾರಿಯಲ್ಲಿನ ದುರಂತದ ಹೊರತಾಗಿಯೂ ಆರೋಗ್ಯ ಸಚಿವರು ಬಾಣಂತಿಯರ ಮರಣ, ಆಸ್ಪತ್ರೆಯಲ್ಲಿ ಸಾವುಗಳು ಸಂಭವಿಸುವುದು ಸಾಮಾನ್ಯ ಎಂಬ ರೀತಿಯಲ್ಲಿ ಮಾತನಾಡಿರುವುದು ವಿರೋಧಕ್ಕೆ ಗುರಿಯಾಗುವ ಸಾಧ್ಯತೆ ಇದೆ.
   ಸರ್ಕಾರ ಬಂದು 17 ತಿಂಗಳಲ್ಲಿ ಅಭಿವೃದ್ಧಿ ಕೆಲಸ ಮಾಡಿಲ್ಲ. 17 ತಿಂಗಳಲ್ಲಿ 17 ಅವಾಂತರ ಮಾಡಿಕೊಂಡಿದೆ. ಸಿಎಂ ಸಿದ್ದರಾಮಯ್ಯ ಅವರು ಕಳೆದ ಭಾರಿ ಸಿಎಂ ಆಗಿದ್ದಾಗಿನ ಆಡಳಿತ ಈ ಬಾರಿ ಕೊಡುತ್ತಿಲ್ಲ. ಇಡೀ ಸರ್ಕಾರವೇ ನಿದ್ದೆ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ನಿದ್ದೆರಾಮಯ್ಯ ಆಗಿದ್ದಾರೆ. ಬೆಳಗಾವಿಯಲ್ಲಿ 325 ಶಿಶುಗಳ‌ ಮರಣವಾಗಿದೆ, ಸಿಎಂ ಗೆ ಹಿಡಿತ ತಪ್ಪಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

Recent Articles

spot_img

Related Stories

Share via
Copy link