ಬೆಂಗಳೂರು:
ಬಿಜೆಪಿ ಜೊತೆ ಸೀಟು ಹಂಚಿಕೆ ವಿಚಾರದಲ್ಲಿ ಜೆಡಿಎಸ್ ಅಸಮಾಧಾನ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಲೇವಡಿ ಮಾಡಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ದಿನೇಶ್ ಗುಂಡೂರಾವ್, ಬಿಜೆಪಿಯು ಜೆಡಿಎಸ್ ಮುಗಿಸುವ ಕೆಲಸ ಮಾಡುತ್ತಿದೆ. ಈಗ ಬಿಜೆಪಿಯವರ ಕೈಯಲ್ಲಿ ಜೆಡಿಎಸ್ ನವರು ಸಿಕ್ಕಿಹಾಕಿಕೊಂಡಿದ್ದಾರೆ. ಹೊರಗೆ ಬರುವುದು ಕೂಡ ಈಗ ಜೆಡಿಎಸ್ ಗೆ ಕಷ್ಟವಾಗಿದೆ. ಜೆಡಿಎಸ್ ನವರು ಮಾತ್ರ ದೆಹಲಿಗೆ ಹೋಗಬೇಕು ಆದರೆ ಮೋದಿ ಬಂದಾಗ ವೇದಿಕೆಗೆ ಕುಮಾರಸ್ವಾಮಿ ಅವರನ್ನು ಕರೆಯಲ್ಲ. ಕುಮಾರಸ್ವಾಮಿಗೆ ಈಗ ತಮ್ಮ ತಪ್ಪು ಅರಿವಾಗುತ್ತಿರುಬಹುದು ಆದ್ರೆ ಬಹಳ ತಡವಾಗಿಬಟ್ಟಿದೆ ಎಂದು ದಿನೇಶ್ ಗುಂಡೂರಾವ್ ಟಾಂಗ್ ಕೊಟ್ಟರು.
ಇನ್ನೂ ನಗರ್ತಪೇಟೆ ಗಲಾಟೆಗೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಈ ಆರೋಪಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ತೇಜಸ್ವಿ ಸೂರ್ಯ ಎಂದಿನಂತೆ ದ್ವೇಷ ಹರಡಲು ಪ್ರಯತ್ನಿಸುತ್ತಿದ್ದಾರೆ. ಹಿಂದೂ ಮತ್ತು ಮುಸ್ಲಿ ಹುಡುಗರು ಒಟ್ಟಾಗಿ ಹಲ್ಲೆ ನಡೆಸಿದ್ದಾರೆ.
ಇನ್ನು ಹನುಮಾನ್ ಚಾಲೀಸಾ ಹಾಕಲಾಗಿತ್ತು ಎಂದು ಯಾರು ಹೇಳಿದರು? ಇದು ಆಜಾನ್ Vs ಭಜನೆ ಜಗಳ ಎಂಬ ತೀರ್ಮಾನಕ್ಕೆ ಹೇಗೆ ಬರುತ್ತೀರಿ..? ಪ್ರಕರಣ ಏನೇ ಇರಲಿ ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಆದರೆ ಬಿಜೆಪಿಯ ಈ ಯುವ ನಾಯಕ ಕೆಳಮಟ್ಟದ ರಾಜಕೀಯ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ.