ಹೊಸಪೇಟೆ :
ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಭಾರತೀಯ ಸರ್ವೇಕ್ಷಣಾ ಇಲಾಖೆಯ ಹಂಪಿ ವೃತ್ತಕ್ಕೆ ಕಲ್ಯಾಣ ಕರ್ನಾಟಕದ ಆರು ಜೆಲ್ಲೆಗಳನ್ನು ಸೇರ್ಪಡೆ ಮಾಡಿ ಆದೇಶ ಹೊರಡಿಸಿದೆ.
ಹಂಪಿ ವೃತ್ತದ ಉಪ ಅಧೀಕ್ಷಕ ಕಾಳಿಮುತ್ತು ಅವರು ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳನ್ನು ಹಂಪಿ ವಲಯಕ್ಕೆ ಸೇರ್ಪಡೆ ಮಾಡಿರುವುದು ಸಂತಸ ತರಿಸಿದೆ. ಈ ಮೊದಲು ಹಂಪಿಯನ್ನು ಹೊರತು ಪಡಿಸಿ ಕಲ್ಯಾಣ ಕರ್ನಾಟಕದ ಭಾಗದ ಜಿಲ್ಲೆಗಳು ಧಾರವಾಡದ ಭಾರತೀಯ ಸರ್ವೇಕ್ಷಣಾ ಸಂಸ್ಥೆಯ ವಲಯದ ವ್ಯಾಪ್ತಿಗೆ ಬರುತ್ತಿದ್ದವು. ಆದರೆ, ಈಗ ಹಂಪಿ ವಲಯಕ್ಕೆ ಸೇರ್ಪಡೆಯಾಗಿವೆ.
ಇದರಿಂದಾಗಿ ಕಲ್ಯಾಣ ಕರ್ನಾಟಕದ ಭಾರತೀಯ ಪುರಾತತ್ವ ಸ್ಮಾರಕಗಳ ಅಭಿವೃದ್ಧಿಗೆ ಹೆಚ್ಚಿನ ಆಧ್ಯತೆ ದೊರೆಯಲಿದೆಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
