ತಮಿಳುನಾಡಿಗೆ ಡಿ. ಕೆ. ಶಿವಕುಮಾರ ಎಂಟ್ರಿ…..!

ಚೆನ್ನೈ:

    ಮೇಕೆದಾಟು ಯೋಜನೆ ವಿರೋಧಿಸಿ ಕಪ್ಪು ಬಟ್ಟೆ ಧರಿಸಿ ತಮಿಳುನಾಡಿನಲ್ಲಿ ಅಣ್ಣಾಮಲೈ ಹಾಗೂ ಮತ್ತಿತರರು ಪ್ರತಿಭಟನೆ ನಡೆಸಿದ್ದಾರೆ. ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಮತ್ತು ಪಕ್ಷದ ಇತರ ನಾಯಕರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

    ಕೇಂದ್ರ ಸರಕಾರದ ಉದ್ದೇಶಿತ ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆಯನ್ನು ವಿರೋಧಿಸಿ ತಮಿಳುನಾಡಿನ ನೇತೃತ್ವದಲ್ಲಿ 7 ರಾಜ್ಯಗಳ ಸಭೆಗೆ ಹಾಜರಾಗಲು ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚೆನ್ನೈ ತಲುಪಿದ್ದಾರೆ.ದಕ್ಷಿಣ ಭಾರತದ ರಾಜ್ಯಗಳ ಜತೆಗೆ ಉತ್ತರ ಭಾರತದ ಒಡಿಶಾ, ಪಶ್ಚಿಮ ಬಂಗಾಲ ಮತ್ತು ಪಂಜಾಬ್ ರಾಜ್ಯಗಳ ಪ್ರತಿನಿಧಿಗಳನ್ನು ಆಹ್ವಾನಿಸಲಾಗಿದೆ.

   ಈ ಸಂದರ್ಭದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಕ್ಷೇತ್ರ ಪುನರ್ ವಿಂಗಡಣೆ ವಿವಾದ ಕುರಿತ ದಕ್ಷಿಣ ರಾಜ್ಯಗಳ ಪ್ರತಿನಿಧಿಗಳನ್ನು ಒಗ್ಗೂಡಿಸುವಲ್ಲಿ ಎಂಕೆ ಸ್ಟಾಲಿನ್ ಮೊದಲ ಹೆಜ್ಜೆ ಇಟ್ಟಿದ್ದಾರೆ. ಅವರು ಈ ದೇಶದ ಒಕ್ಕೂಟ ಮತ್ತು ಸಂವಿಧಾನವನ್ನು ರಕ್ಷಿಸುತ್ತಿದ್ದಾರೆ ಎಂಬ ಹೆಮ್ಮೆ ನಮಗೆ ಇದೆ. ಮುಂದೆ ಏನು ಅನುಸರಿಸಬೇಕು ಹಾಗೂ ಹೇಗೆ ಒಗ್ಗೂಡಿ ಕೆಲಸ ಮಾಡಬೇಕು ಎಂಬುದರ ಕುರಿತು ನಾವೆಲ್ಲರೂ ಚರ್ಚಿಸುತ್ತೇವೆ, ತೆಲಂಗಾಣ, ಪಂಜಾಬ್, ಕೇರಳದ ನಾಯಕರು ಸೇರಿದಂತೆ ನಾವೆಲ್ಲರೂ ಇಲ್ಲಿ ಸೇರಿಕೊಂಡಿದ್ದೇವೆ. ಯಾವುದೇ ಕಾರಣಕ್ಕೂ ನಾವು ನಮ್ಮ ದೇಶವನ್ನು ನಿರಾಸೆಗೊಳಿಸುವುದಿಲ್ಲ ಮತ್ತು ನಮ್ಮ ಸ್ಥಾನಗಳನ್ನು ಕಡಿಮೆ ಮಾಡಲು ಸಾಧ್ಯವಿಲ್ಲ. ನಮ್ಮದು ಬಹಳ ಪ್ರಗತಿಪರ ರಾಜ್ಯವಾಗಿದ್ದು, ಆರ್ಥಿಕವಾಗಿ ಮತ್ತು ಸಾಕ್ಷರತೆಯಲ್ಲಿ ಗಟ್ಟಿಯಾಗಿ ನಿಂತಿದ್ದೇವೆ ಎಂದರು.