ನಮ್ಮದು ಆಪರೇಷನ್ ಅಲ್ಲ, ಸ್ನೇಹದ ಹಸ್ತ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು

    ನಾನು ಆಪರೇಷನ್ ಹಸ್ತ, ಆಪರೇಷನ್ ಕಮಲ ಎರಡರ ವಿರೋಧಿ. ಯಾವುದೇ ಕಾರಣಕ್ಕೂ ಈ ಕೆಲಸಕ್ಕೆ ಮುಂದಾಗುವುದಿಲ್ಲ. ನಮ್ಮದೇನಿದ್ದರು ಕೋ-ಆಪರೇಷನ್? ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಹೊಸದಾಗಿ ವ್ಯಾಖ್ಯಾನ ಮಾಡಿದ್ದಾರೆ.

     ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರ ಜೊತೆ ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿಯ ಸುಕುಮಾರ್ ಶೆಟ್ಟಿ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆಯೇ ಎಂದು ಕೇಳಿದ ಪ್ರಶ್ನೆಗೆ “ನಾವು ಸ್ನೇಹದ ಹಸ್ತ ಚಾಚುತ್ತೇವೆ. ನಮ್ಮ ಪಕ್ಷದ ತತ್ವ ಸಿದ್ದಾಂತ, ಭಾರತ್ ಜೋಡೊ ಬಗ್ಗೆ ಯಾರಿಗೆ ಒಲವಿದೆ ಅವರನ್ನು ತಬ್ಬಿಕೊಳ್ಳುತ್ತೇವೆ. ಅವರ ಹೆಗಲ ಮೇಲೆ ಕೈಹಾಕಿಕೊಂಡು ಹೆಜ್ಜೆ ಹಾಕುತ್ತೇವೆ? ಎಂದರು.

     ಹಾಲಿ- ಮಾಜಿಗಳನ್ನ ಯಾವಾಗ ತಬ್ಬಿಕೊಳ್ಳುವಿರಿ ಎಂಬ ಮರುಪ್ರಶ್ನೆಗೆ ಉತ್ತರಿಸುತ್ತಾ “ಎಷ್ಟು ಜನ ಸೇರಲಿದ್ದಾರೆ ಎನ್ನುವ ಪಟ್ಟಿ ಹೇಳಲು ಆಗಲ್ಲ. ಅವರವರೇ ಹೇಳಿರುವಂತೆ ಒಳ್ಳೆ ಮುಹೂರ್ತ, ಲಗ್ನ ಕೂಡಿಬಂದಾಗ ನಡೆಯಲಿದೆ? ಎಂದು ತಿಳಿಸಿದರು.

     ರಾಜಕೀಯದಲ್ಲಿ ಯಾರೂ ಮಿತ್ರರಲ್ಲ, ಶತ್ರುಗಳಲ್ಲ. ರಾಜಕೀಯ ಎನ್ನುವುದು ಸಾಧ್ಯತೆಗಳ ಕಲೆ ನಾವು ಯಾರನ್ನು ಕರೆಯುವುದಿಲ್ಲ. ರಾಜಕೀಯದಲ್ಲಿ ಯಾರೂ ದಡ್ಡರಲ್ಲ. ಎಲ್ಲರೂ ಅವರವರ ಭವಿಷ್ಯ ನೋಡಿಕೊಳ್ಳಬೇಕು. ಮಹಾರಾಷ್ಟçದಲ್ಲಿ ಎಲ್ಲಾ ವಾಷಿಂಗ್ ಮೆಷಿನ್ ಸೇರಿಕೊಂಡು ಬಿಡಲಿಲ್ಲವೇ” ಎಂದು ತಿಳಿಸಿದರು.

     ಕಾವೇರಿ ನೀರನ್ನು ನಿಲ್ಲಿಸಲಾಗಿದೆಯೇ ಎನ್ನುವ ಪ್ರಶ್ನೆಗೆ “ನಮಗೆ ಸಾಕಷ್ಟು ಒಳಹರಿವು ಬರುತ್ತಿಲ್ಲ. ಸುಪ್ರೀಂ ಕೋರ್ಟ್ ಹೇಳಿದ ಪ್ರಮಾಣದಷ್ಟು ನೀರನ್ನು ಬಿಡಲು ಆಗುತ್ತಿಲ್ಲ. ಮಳೆಯ ನಿರೀಕ್ಷೆಯಲ್ಲಿದ್ದೇವೆ. ಜೊತೆಗೆ ನಮ್ಮ ರೈತರ ಹಿತ ಕಾಯುವುದು ಮುಖ್ಯ, ಅದಕ್ಕೆ ನಾವು ಬದ್ಧ. ನೀರು ಬಿಡುಗಡೆ ಮಾಡಬಾರದು ಎಂದು ಪ್ರತಿಭಟನೆಗಳು ನಡೆಯುತ್ತಿವೆ, ಬೆಂಗಳೂರು, ರಾಮನಗರ ಭಾಗಗಳಲ್ಲಿ ಮಳೆ ಬೀಳುತ್ತಿರುವ ಕಾರಣ ಸ್ವಲ್ಪ ಮಟ್ಟಿಗೆ ಪರಿಸ್ಥಿತಿ ನಿಭಾಯಿಸಲಾಗುತ್ತಿದೆ.

    ರೈತರ ಬೆಳೆ ಹಾಗೂ ಕುಡಿಯುವ ನೀರು ನಮ್ಮ ಆದ್ಯತೆ? ಎಂದು ಹೇಳಿದರು. ನಿಗಧಿ ಮಾಡಿದಷ್ಟು ನೀರು ಬಿಡುಗಡೆ ಮಾಡಲಾಗಿದೆಯೇ ಎನ್ನುವ ಪ್ರಶ್ನೆಗೆ “ಬಿಡುಗಡೆ ಮಾಡಲು ನೀರೇ ಇಲ್ಲ” ಎಂದು ಪ್ರತಿಕ್ರಿಯೆ ನೀಡಿದರು. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಜನವಿರೋಧಿ ಸರ್ಕಾರ ಎಂದು ಪ್ರತಿಭಟನೆ ಮಾಡಲಾಗುತ್ತಿದೆ ಎನ್ನುವ ಪ್ರಶ್ನೆಗೆ “ಮೊದಲು ಮೇಕೆದಾಟು ಮತ್ತು ಮಹದಾಯಿಗೆ ಬಿಜೆಪಿಯವರು ಕೇಂದ್ರದಿAದ ಒಪ್ಪಿಗೆ ಕೊಡಿಸಲಿ? ಎಂದು ಸವಾಲು ಹಾಕಿದರು.

     ಜನವಿರೋಧಿ ಎಂದರೆ ಏನು? ಜನ ಬಿಜೆಪಿಯವರನ್ನು ವಿರೋಧಿಸಿಯೇ ಮನೆಯಲ್ಲಿ ಕೂರಿಸಿದ್ದಾರೆ. ನಂತರ ಅವರಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳುವಷ್ಟು ಅರ್ಹತೆ ಇಲ್ಲ. ಹೆಣ್ಣು ಮಕ್ಕಳು ಉಚಿತವಾಗಿ ಬಸ್ ಅಲ್ಲಿ ಓಡಾಡುತ್ತಿರುವುದು, 2 ಸಾವಿರ ಖಾತೆಗೆ ಬರುತ್ತಿರುವುದು ನೋಡಿ ಅವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ಗ್ಯಾರಂಟಿ ಯೋಜನೆಗಳು ಅವರ ಹೊಟ್ಟೆಯನ್ನು ಉರಿಸುತ್ತಿದೆ.

    ಯಡಿಯೂರಪ್ಪ ಅವರು ತಮ್ಮ ರಾಜಕೀಯ ಉಳಿವಿಗಾಗಿ ಮಾಡುತ್ತಿದ್ದಾರೆ ಮಾಡಲಿ. ಪ್ರತಿಭಟನೆಗಳು ಇರಬೇಕು ಆಗ ನಾವು ನಮ್ಮ ಶಾಸಕರು ಎಚ್ಚರಿಕೆಯಿಂದ ಕೆಲಸ ಮಾಡುತ್ತೇವೆ. ನಮಗೂ ಹುಮ್ಮಸ್ಸು ಬರುತ್ತದೆ. 100 ದಿನಗಳಲ್ಲಿ ಇಷ್ಟೊಂದು ಸಾಧನೆ ಮಾಡಿದ ಸರ್ಕಾರ ಭಾರತದಲ್ಲೇ ಇಲ್ಲ. ಯಾರೋ 100 ದಿನಗಳಲ್ಲಿ 15 ಲಕ್ಷ ಹಣ ಕೊಡುತ್ತೇನೆ ಎಂದಿದ್ದರು? ಅವರ ಪ್ರಣಾಳಿಕೆಯ ಬಗ್ಗೆ ಮೊದಲು ಯೋಚಿಸಲಿ? ತಿರುಗೇಟು ನೀಡಿದರು..

    ದೇವೇಗೌಡರು ಹಾಗೂ ಅಮಿತ್ ಷಾ ಭೇಟಿಯಾಗಿ ಹೊಂದಾಣಿಕೆಯ ಮಾತುಗಳನ್ನಾಡಿದ್ದಾರೆ ಎನ್ನುವ ಪ್ರಶ್ನೆಗೆ “ಇದೇನು ಹೊಸ ವಿಚಾರವೇನಲ್ಲ, ಅವರ ಪಕ್ಷದ ಬಗ್ಗೆ ನಾನ್ಯಾಕೆ ಮಾತನಾಡಲಿ, ಒಂದಾಗಲಿ ಬಿಡಿ. ಅವರಿಗೆ ಒಳ್ಳೆಯದಾಗಲಿ, ಆಲ್ ದಿ ಬೆಸ್ಟ್? ಎಂದರು.

    ಕುಮಾರಸ್ವಾಮಿ ಹಾಗೂ ಆಶೋಕ್ ಅವರು ಒಂದಾಗಿದ್ದರು, ಈಗ ಯೋಗೇಶ್ವರ್ ಮತ್ತು ಕುಮಾರಸ್ವಾಮಿ ಅವರು ಒಂದಾಗುತ್ತಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಯಾರೇ ಒಂದಾದರೂ ನಮಗೆ ಸಂತೋಷ? ಎಂದು ಹೇಳಿದರು.

    “ಅವರವರ ಉಳಿವಿಗಾಗಿ, ಭವಿಷ್ಯಕ್ಕಾಗಿ ಏನು ಬೇಕಾದರೂ ಮಾಡಲಿ. ಆದರೆ ಅವರುಗಳ ಸಿದ್ಧಾಂತ ಏನಾಗುತ್ತದೆ ಎಂಬುದು ಕುತೂಹಲ ಎಂದರು. ಹಿರಿಯರಾದ ದೇವೆಗೌಡರು ಯಾವುದೇ ಕಾರಣಕ್ಕೂ ಬಿಜೆಪಿ ಜೊತೆ ಹೋಗುವುದಿಲ್ಲ ಎಂದಿದ್ದರು. ಒಂದು ಸಿದ್ದಾಂತ ಇಟ್ಟುಕೊಂಡು ಪಕ್ಷ ಕಟ್ಟಿರುತ್ತಾರೆ, ಈಗ ಆ ಪಕ್ಷ ಉಳಿಯುತ್ತದೊ ಏನಾಗುತ್ತದೊ ಗೊತ್ತಿಲ್ಲ? ಹಾಲಿ ಶಾಸಕರು, ಮಾಜಿ ಶಾಸಕರು ಏನಾಗುತ್ತಾರೊ ಅದರ ಬಗ್ಗೆ ನನಗೆ ಗೊತ್ತಿಲ್ಲ? ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap