ಮಂಗಳೂರು :
ಸಿಎಂ ಯಡಿಯೂರಪ್ಪ ತಮ್ಮ ಆಡಳಿತ ಸರಿಯಿದೆ ಎನ್ನುವುದಾದರೆ ಸಂಜೆಯೊಳಗೆ ಸಚಿವ ಈಶ್ವರಪ್ಪ ಅವರನ್ನು ವಜಾ ಮಾಡಲಿ. ಇಲ್ಲವೇ ಯಡಿಯೂರಪ್ಪ ಸ್ವಯಂ ಪ್ರೇರಿತರಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.
ಸಚಿವ ಈಶ್ವರಪ್ಪ, ಮುಖ್ಯಮಂತ್ರಿ ವಿರುದ್ಧವೇ ರಾಜ್ಯಪಾಲರು, ರಾಜ್ಯ ಬಿಜೆಪಿ ಉಸ್ತುವಾರಿಗೆ ಪತ್ರ ಬರೆದಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಇಂತಹ ಸಚಿವರನ್ನು ಕೂಡಲೇ ಸಚಿವ ಸ್ಥಾನದಿಂದ ಉಚ್ಛಾಟಿಸಿ, ಇಲ್ಲವಾದರೆ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಕೊಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈವರೆಗೆ ಯಾವುದೇ ಒಬ್ಬರೇ ಒಬ್ಬ ಸಚಿವರು ಸಿಎಂ ಆಡಳಿತದ ಬಗ್ಗೆ ಚರ್ಚೆ ಮಾಡಿಲ್ಲ. ಆದರೆ ಸಚಿವ ಈಶ್ವರಪ್ಪನವರು ಮಾಡಿದ್ದಾರೆ. ಈ ಮೂಲಕ ದೇಶಕ್ಕೆ ಪಾಠ ಹೇಳುತ್ತಿದ್ದವರು ಆಡಳಿತ ಪಾಠವನ್ನು ದೇಶಕ್ಕೆ ಮಾಡಿದ್ದಾರೆ ಎಂದರು.
ಇನ್ನೂ ಮುಂದುವರೆದು ಮಾತನಾಡಿದ ಅವರು, ಸಚಿವ ಈಶ್ವರಪ್ಪ ಬರೆದಿರುವಂತ ಪತ್ರ ಕೇವಲ ಪತ್ರವಲ್ಲ. ರಾಜ್ಯ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ತೋರಿಸಿಕೊಟ್ಟಿದೆ ಎಂದು ಹೇಳಿದರು.