ಡಿ.ಕೆ. ಶಿವಕುಮಾರ್ ಅವರ ನಾಮಪತ್ರ ಅಂಗೀಕಾರ…!

ಬೆಂಗಳೂರು:

     ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ಕನಕಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಾಮಪತ್ರ ಅಂಗೀಕಾರವಾಗಿದೆ.

    ಕರ್ನಾಟಕ ವಿಧಾನಸಭೆ ಚುನಾವಣೆಯ ನಾಮಪತ್ರ ಪರಿಶೀಲನೆ ಇಂದು (ಶುಕ್ರವಾರ, ಏಪ್ರಿಲ್ 21) ನಡೆಯುತ್ತಿದ್ದು, ಭಾರೀ ಕುತೂಹಲ ಕೆರಳಿಸಿದ್ದ ಕನಕಪುರ ಕ್ಷೇತ್ರದಲ್ಲಿ ಡಿ.ಕೆ. ಶಿವಕುಮಾರ್ ಅವರ ನಾಮಪತ್ರ ಕ್ರಮಬದ್ಧವಾಗಿದೆ ಎಂದು ಚುನಾವಣಾಧಿಕಾರಿಗಳು ಅನುಮೋದಿಸಿದ್ದಾರೆ.

    ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತವಾಗುವ ಭೀತಿಯಲ್ಲಿದ್ದ ಕಾರಣ, ನಾಮಪತ್ರ ಸಲ್ಲಿಕೆಯ ಕೊನೆಯ ದಿನದಂದು ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಕೂಡ ಬ್ಯಾಕ್‌ಅಪ್ ಆಗಿ ಕನಕಪುರದಲ್ಲಿ ನಾಮಪತ್ರ ಸಲ್ಲಿಸಿದ್ದರು.

    2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಅಚ್ಚರಿಯ ಬೆಳವಣಿಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಸಂಸದ ಡಿ.ಕೆ. ಸುರೇಶ್ ಅವರು ಕನಕಪುರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ, ಏಪ್ರಿಲ್ 20ರಂದು ನಾಮಪತ್ರ ಸಲ್ಲಿಸಿದಾಗ ರಾಜ್ಯದ ಜನರ ಗಮನ ಸೆಳೆಯಲಾಗಿತ್ತು. ಸೋಮವಾರ, ಏಪ್ರಿಲ್ 17ರಂದು ದೊಡ್ಡ ಮೆರವಣಿಗೆಯ ಮೂಲಕ ಅಪಾರ ಬೆಂಬಲಿಗರು ಮತ್ತು ಕಾರ್ಯಕರ್ತರೊಂದಿಗೆ ತೆರಳಿ ಕನಕಪುರ ಚುನಾವಣಾಧಿಕಾರಿ ಸಂತೋಷ್ ಅವರಿಗೆ ಡಿ.ಕೆ. ಶಿವಕುಮಾರ್ ನಾಲ್ಕು ಸೆಟ್ ನಾಮಪತ್ರ ಸಲ್ಲಿಸಿದ್ದರು.

     ಚುನಾವಣಾಧಿಕಾರಿ ಸಂತೋಷ್ ಅವರೇ ಡಿ.ಕೆ. ಶಿವಕುಮಾರ್ ಅವರ ನಾಮಪತ್ರ ಊರ್ಜಿತವೆಂದು ಘೋಷಿಸಿದ್ದಾರೆ. ಈ ಮೊದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ನಾಮಪತ್ರದಲ್ಲಿ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಅಥವಾ ಕೆಲವು ಪ್ರಕರಣಗಳಲ್ಲಿ ಸಿಬಿಐ ತನಿಖೆಗೆ ಹೈಕೋರ್ಟ್ ಅನುಮತಿ ನೀಡಿರುವ ಕಾರಣ, ನಾಮಪತ್ರ ತಿರಸ್ಕೃತವಾಗುವ ಭೀತಿಯಲ್ಲಿ ಕಾಂಗ್ರೆಸ್‌ನ ಸಂಭಾವ್ಯ ಬದಲಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಆ ಬಳಿಕೆ ಬಿಜೆಪಿ ನಾಮಪತ್ರ ತಿರಸ್ಕೃತವಾಗುವಂತೆ ಕುತಂತ್ರ ಮಾಡುತ್ತಿದ್ದಾರೆ ಎಂದು ಡಿ.ಕೆ. ಸುರೇಶ್ ಆರೋಪಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap