ಬೆಂಗಳೂರು:
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ, ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ, ಬೆಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಈ ವೇಳೆ ಪೊಲೀಸರ ಸರ್ಪಗಾವಲನ್ನು ಲೆಕ್ಕಿಸಿ, ಬ್ಯಾರಿಗೇಡ್ ಹತ್ತಿದಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಪೊಲೀಸರ ಮೇಲೆ ಎಗರಿದ ಘಟನೆಯೂ ನಡೆಯಿತು.
ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಕೆ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ, ಸಚಿವ ಈಶ್ವರಪ್ಪ ರಾಜೀನಾಮೆ, ಹಾಗೂ ಬಂಧನಕ್ಕೆ ಆಗ್ರಹಿಸಿ ಇಂದು ಸಿಎಂ ನಿವಾಸಕ್ಕೆ ಮುತ್ತಿಗೆ ಪ್ರತಿಭಟನೆಯನ್ನು ಕಾಂಗ್ರೆಸ್ ಹಮ್ಮಿಕೊಂಡಿತ್ತು.
ಯಶವಂತಪುರದ ಸಂವಿಧಾನ ವೃತ್ತದಲ್ಲಿ ಅಂಬೇಡ್ಕರ್ ಜಯಂತ್ಯುತ್ಸವ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕಾಂಗ್ರೆಸ್ ಭವನದಿಂದ ಜಾಥಾದಲ್ಲಿ ಸಾಗಿದಂತ ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ವಿವಿಧ ಕಾಂಗ್ರೆಸ್ ಮುಖಂಡರು ಸಿಎಂ ಮನೆ ಮುತ್ತಿಗೆ, ಘೆರಾವ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಕಾಂಗ್ರೆಸ್ ಭವನದಲ್ಲಿ ಡಿ.ಕೆ. ಶಿವಕುಮಾರ್ ಅವರು ಅಂಬೇಡ್ಕರ್ ಜಯಂತಿ ಕುರಿತು ಮಾಧ್ಯಮಗಳಿಗೆ ನೀಡಿದ ಮಾಹಿತಿ
ಈ ವೇಳೆ ಸಿಎಂ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಬರ್ತಾ ಇರುವಂತ ಕಾಂಗ್ರೆಸ್ ನಾಯಕರನ್ನು ತಡೆಯಲು ಪೊಲೀಸರು ರೇಸ್ ಕೋರ್ಸ್ ರಸ್ತೆಯ ಬಳಿ ಬ್ಯಾರಿಕೇಡ್ ಹಾಕಿ ಕಾಯುತ್ತಿದ್ದರು. ಇಲ್ಲಿಗೆ ಆಗಮಿಸಿದಂತ ಕಾಂಗ್ರೆಸ್ ಮುಖಂಡರು, ಸಿಎಂ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಬ್ಯಾರಿಗೇಡ್ ಕೂಡ ಲೆಕ್ಕಿಸದೇ ಅದನ್ನು ಹತ್ತಿ, ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕೋದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬ್ಯಾರಿಗೇಡ್ ಎಗರಿ, ಪೊಲೀಸರ ಮೇಲೆ ಜಿಗಿದ ಘಟನೆಯೂ ನಡೆಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ