ಕಲ್ಪತರು ನಾಡು ತುಮಕೂರಿನ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಡಿಕೆ ಶಿವಕುಮಾರ್

ತುಮಕೂರು

    ಸಹಕಾರ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ.ಎನ್. ರಾಜಣ್ಣ ಅವರ 75ನೇ ಹುಟ್ಟುಹಬ್ಬದ ನಿಮಿತ್ತ ಇಂದು ತುಮಕೂರಿನಲ್ಲಿ ಆಯೋಜಿಸಿದ್ದ ಅಮೃತ ಮಹೋತ್ಸವ ಮತ್ತು ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಪಾಲ್ಗೊಂಡು, ರಾಜಣ್ಣನವರಿಗೆ ಜನ್ಮದಿನದ ಶುಭಾಶಯ ತಿಳಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದೆ.

     ರೈತರಿಗೆ ಪಿಂಚಣಿ ಇಲ್ಲ. ಆದರೆ ಸಹಕಾರ ಕ್ಷೇತ್ರದ ಮೂಲಕ ರೈತರ ಅಭಿವೃದ್ಧಿಗಾಗಿ ಶ್ರಮಿಸಲಾಗುತ್ತಿದೆ. ಸಹಕಾರ ಕ್ಷೇತ್ರದಲ್ಲಿ ಕ್ರಾಂತಿ ಮಾಡಿರುವ ‌ರಾಜಣ್ಣನವರಿಗೆ ನಮ್ಮ ಸರ್ಕಾರ ಜವಾಬ್ದಾರಿಯನ್ನು ವಹಿಸಿದೆ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬುವುದೇ ಕಾಂಗ್ರೆಸ್ ತತ್ವ. ಕಲ್ಪತರು ನಾಡು ತುಮಕೂರಿನ ಅಭಿವೃದ್ಧಿಗೂ ನಮ್ಮ ಸರ್ಕಾರ ಬದ್ಧವಾಗಿದ್ದು, ತುಮಕೂರನ್ನು ಸ್ಯಾಟಲೈಟ್ ನಗರವನ್ನಾಗಿ ಅಭಿವೃದ್ಧಿಪಡಿಸಲು ನಮ್ಮ ಸರ್ಕಾರ ಯೋಜನೆಗಳನ್ನು ರೂಪಿಸುತ್ತಿದೆ.

     2027ರ ವೇಳೆಗೆ ಕೋಲಾರ, ತುಮಕೂರು ಸೇರಿದಂತೆ ಬಯಲು ಸೀಮೆಯ ಜಿಲ್ಲೆಗಳಿಗೆ ಎತ್ತಿನಹೊಳೆ ನೀರನ್ನು ಹರಿಸಬೇಕೆನ್ನುವುದು ನಮ್ಮ ಸರ್ಕಾರದ ಸಂಕಲ್ಪ. ಎತ್ತಿನಹೊಳೆ ಯೋಜನೆಯನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ನನಗೆ ನಿರ್ದೇಶನ ನೀಡಿದ್ದು, ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ನಮ್ಮ ಸರ್ಕಾರ ಬದ್ಧವಿದೆ.

Recent Articles

spot_img

Related Stories

Share via
Copy link