ಕನಕಪುರ : ಡಿ ಕೆ ಸುರೇಶ್‌ ನಾಮಪತ್ರ ಸಲ್ಲಿಕ್ಕೆ….!

ಕನಕಪುರ

     ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲ ದಿನಗಳು ಬಾಕಿ ಇರುವಾಗಲೇ ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಸುದ್ದಿಯೊಂದು ಹೊರಬಿದ್ದಿದೆ. ಕೆಪಿಸಿಸಿ ಅಧ್ಯಕ್ಷ, ಕಾಂಗ್ರೆಸ್‌ನ ಪ್ರಬಲ ನಾಯಕ ಡಿಕೆ ಶಿವಕುಮಾರ್‌ ಅವರು ಕನಕಪುರದಿಂದ ನಾಮಪತ್ರ ಸಲ್ಲಿಸಿದ್ದರು. ಆದರೆ, ಅವರ ಸಹೋದರ, ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್‌ ಅವರು ನಾಮಪತ್ರ ಸಲ್ಲಿಸಿ ಅಚ್ಚರಿ ಹುಟ್ಟಿಸಿದ್ದಾರೆ.

    ಡಿಕೆ ಸುರೇಶ್‌ ಅವರು ಪದ್ಮನಾಭನಗರದಿಂದ ಆರ್. ಅಶೋಕ ವಿರುದ್ಧ ಸ್ಪರ್ದೆ ಮಾಡುತ್ತಾರೆ ಎನ್ನಲಾಗಿತ್ತು. ನಾಮಪತ್ರ ಸಲ್ಲಿಕೆಯ ಕಡೆ ಕ್ಷಣದಲ್ಲಿ ಡಿ.ಕೆ.ಸುರೇಶ್ ಅವರು ನಾಮಪತ್ರ ಸಲ್ಲಿಸಿದ್ದು ಭಾರೀ ಕುತೂಹಲವನ್ನು ಕೆರಳಿಸಿದೆ.

     ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ನಾಮಪತ್ರ ಅನರ್ಹವಾಗಬುದು ಎಂಬ ಬೀತಿಯಲ್ಲಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕನಕಪುರದಿಂದ ಡಿಕೆಶಿ ಪುತ್ರಿ ಐಶ್ವರ್ಯ ಅವರು ಸ್ಪರ್ಧಿಸುತ್ತಾರೆ ಎನ್ನಲಾಗಿತ್ತು. ಆದರೆ, ಈಗ ಡಿಕೆ ಸುರೇಶ್‌ ಕಣಕ್ಕಿಳಿದಿರುವುದು ಅಚ್ಚರಿಗೆ ಕಾರಣವಾಗಿದೆ.
 
     ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಿವಕುಮಾರ್, ಸುರೇಶ್ ಅವರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಹೇಳಿದ್ದರು. ‘ಅವರು ನಾಮಪತ್ರ ಸಲ್ಲಿಸುತ್ತಾರೆ. ಆದರೆ ಕ್ಷೇತ್ರ ಇನ್ನೂ ನಿರ್ಧಾರವಾಗಿಲ್ಲ’ ಎಂದಿದ್ದರು. ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಸುರೇಶ್, ತಮ್ಮ ಅಭ್ಯರ್ಥಿಯಾಗುವ ಬಗ್ಗೆ ಎಐಸಿಸಿಯಲ್ಲಿ ಚರ್ಚೆ ನಡೆಯುತ್ತಿದೆ ಎಂದು ಹೇಳಿದ್ದರು.
 
     ಸಹೋದರರು ಎಂದರೆ ಹೀಗಿರಬೇಕು, ಅಣ್ಣನ ಎಲ್ಲಾ ಕಷ್ಟಸುಖಕ್ಕೆ ಸಾಥ್ ನೀಡುವ ಡಿ.ಕೆ.ಸುರೇಶ್ ‘ನಾಮಪತ್ರ ಸಲ್ಲಿಸಲು ಮತ್ತು ಎಲ್ಲಾ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಅವರು ನನಗೆ ಹೇಳಿದ್ದಾರೆ. ಎಐಸಿಸಿ ನಾಯಕರು ತಮ್ಮ ನಿರ್ಧಾರ ತಿಳಿಸುತ್ತಾರೆ ಎಂದು ಕಾಯುತ್ತಿದ್ದೇನೆ’ ಎಂಬುದಾಗಿ ಡಿಕೆ ಸುರೇಶ್‌ ತಿಳಿಸಿದ್ದರು. ಪದ್ಮನಾಭನಗರದಲ್ಲಿ ಬಿಜೆಪಿಯ ಆರ್ ಅಶೋಕ್‌ ವಿರುದ್ಧ ಸುರೇಶ್ ಕಣಕ್ಕಿಳಿಯುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿದ್ದವು.
      ಪದ್ಮನಾಭನಗರದ ಕಾಂಗ್ರೆಸ್ ಅಭ್ಯರ್ಥಿ ರಘುನಾಥ ನಾಯ್ಡು ಅವರ ಬದಲಿಗೆ ಸ್ಪರ್ಧಿಸುವಂತೆ ಆಹ್ವಾನ ನೀಡಿದ್ದಾರೆ ಎಂದು ಸುರೇಶ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದರು. ಪ್ರಸ್ತುತ ಕಂದಾಯ ಸಚಿವರಾಗಿರುವ ಅಶೋಕ್‌, 2008 ರಿಂದ ಪದ್ಮನಾಭನಗರದಲ್ಲಿ ಆರ್‌ ಅಶೋಕ್‌ ಅವರು ಮೂರು ಬಾರಿ ಗೆದ್ದಿದ್ದಾರೆ. ಶಿವಕುಮಾರ್ ಪ್ರತಿನಿಧಿಸುವ ಕನಕಪುರದಲ್ಲಿ ಬಿಜೆಪಿಗೆ ಕಾಂಗ್ರೆಸ್ ಮತಗಳನ್ನು ಸೆಳೆಯುವ ಪ್ರಯತ್ನದಲ್ಲಿ ಆರ್‌ ಅಶೋಕ್‌ ಇದ್ದಾರೆ. ಪದ್ಮನಾಭನಗರ ಮತ್ತು ಕನಕಪುರ ಎರಡರಿಂದಲೂ ಅಶೋಕ್‌ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.
      ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಕಣಕ್ಕಿಳಿದಿರುವ ಕಂದಾಯ ಸಚಿವ ಆರ್.ಅಶೋಕ್‌ ಮಂಗಳವಾರ ಕನಕಪುರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ಮುನ್ನ ಬೃಹತ್ ಸಮಾವೇಶ ನಡೆಸಿ ಶಕ್ತಿ ಪ್ರದರ್ಶನ ನಡೆಸಿದರು. ತಮ್ಮ ವರ್ಚಸ್ಸು ಬೆಂಗಳೂರನ್ನೂ ಮೀರಿದೆ ಎಂದು ಬಿಂಬಿಸಲು ಒಕ್ಕಲಿಗ ನಾಯಕ ಆರ್‌ ಅಶೋಖ್‌ ಯತ್ನಿಸಿದ್ದಾರೆ.
 
    ಇದೀಗ ಕನಕಪುರದ ಭದ್ರಕೋಟೆಯಲ್ಲಿ ಶಿವಕುಮಾರ್‌ಗೆ ಸವಾಲು ಹಾಕಿದ್ದಾರೆ. ಅವರ ಜೊತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಮತ್ತಿತರರು ಇದ್ದರು. ಇದೇ ವೇಳೆ ಚನ್ನಪಟ್ಟಣದಿಂದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಸ್ಪರ್ಧಿಸಲು ಬಿಜೆಪಿ ಅಭ್ಯರ್ಥಿ ಸಿಪಿ ಯೋಗೇಶ್ವರ ನಾಮಪತ್ರ ಸಲ್ಲಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap