ಬೆಂಗಳೂರು:
ಸರ್ಕಾರಿ ಸ್ವಾಮ್ಯದ ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ರಾಜ್ಯ ಸರ್ಕಾರ ಭಾನುವಾರ ಚಾಲನೆ ನೀಡಿದ್ದು, ಎರಡನೇ ದಿನವಾದ ಸೋಮವಾರ ಬರೋಬ್ಬರಿ 41. 34 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.
ಶಕ್ತಿ ಯೋಜನೆಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು, ಮೊದಲ ದಿನವಾದ ಭಾನುವಾರ ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 12ರವರೆಗೆ ಒಟ್ಟು 5.71 ಲಕ್ಷ ಮಹಿಳೆಯರು ಪ್ರಯಾಣಿಸಿದ್ದರು. ಎರಡನೇ ದಿನವಾದ ಸೋಮವಾರ ಒಟ್ಟು 41,34,726 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.