ಬಿಎಂಟಿಸಿ ಸಂಗ್ರಹಿಸಿದ ಒಟ್ಟು ದಂಡ ಎಷ್ಟು ಗೊತ್ತಾ…?

ಬೆಂಗಳೂರು

     ಸಾಮಾನ್ಯವಾಗಿ ಯಾವುದೇ ಸರ್ಕಾರಿ ಬಸ್‌ಗಳಲ್ಲಿ ನಿಯಮದ ಪ್ರಕಾರ ಟಿಕೆಟ್‌ ಇಲ್ಲದೆ ಪ್ರಯಾಣ ಮಾಡುವಂತಿಲ್ಲ. ಆದರೂ ಇತ್ತೀಚಿನ ದಿನಗಳಲ್ಲಿ ಈ ನಿಯಮವನ್ನು ಉಲ್ಲಂಘಿಸುವವರ ಸಂಖ್ಯೆ ಹೆಚ್ಚಾಗಿಬಿಟ್ಟಿದೆ, ಅದರಲ್ಲೂ ಪ್ರಮುಖವಾಗಿ ಬೆಂಗಳೂರಿನಲ್ಲಿ. ಇನ್ನು ಬಿಎಂಟಿಸಿ ಬಸ್‌ಗಳಲ್ಲಿ ಮಾರ್ಚ್‌ ತಿಂಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸಿದ 3,840 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಎಷ್ಟು ದಂಡ ಕಲೆಕ್ಟ್‌ ಆಗಿದೆ ಎಂದು ಇಲ್ಲಿ ತಿಳಿಯಿರಿ.

    ಕಳೆದ ಮಾರ್ಚ್‌ ತಿಂಗಳಿನಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ 17,900 ಟ್ರಿಪ್‌ಗಳನ್ನು ತಪಾಸಣೆ ಮಾಡಲಾಗಿದ್ದು, ಟಿಕೆಟ್‌ ಇಲ್ಲದೆ ಪ್ರಯಾಣ ಮಾಡಿದ್ದ 3,840 ಮಂದಿ ಪತ್ತೆ ಸಿಕ್ಕಿಬಿದ್ದಿದ್ದರು. ಇನ್ನು ಇವರಿಂದ 7,65,090 ರೂಪಾಯಿ ದಂಡ ವಸೂಲಿ ಮಾಡಲಾಗಿದ್ದು, ಮತ್ತೊಂದೆಡೆ ಕರ್ತವ್ಯ ಲೋಪವೆಸಗಿದ ಹಿನ್ಬೆಲೆ ಬಿಎಂಟಿಸಿ ಸಂಸ್ಥೆಯು 1,101 ನಿರ್ವಾಹಕರ ವಿರುದ್ಧವೂ ಪ್ರಕರಣ ದಾಖಲಿಸಿದೆ ಎಂದು ತಿಳಿದುಬಂದಿದೆ.

   ಇನ್ನು ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣ ಮಾಡಿದ 530 ಪುರುಷ ಪ್ರಯಾಣಿಕರಿಗೆ 53,000 ರೂಪಾಯಿ ದಂಡ ವಿಧಿಸಲಾಗಿದೆ ಎಂದು ಬಿಎಂಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನೂ ಇದೇ ರೀತಿ ಇನ್ನು ಬೇರೆ ಬೇರೆ ನಿಗಂಗಳಲ್ಲೂ ನಡೆಯುತ್ತಲೇ ಇರುತ್ತದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ