34 ದಿನಗಳಲ್ಲಿ ಮಹದೇಶ್ವರ ಸ್ವಾಮಿಗೆ ಬಂದ ಕಾಣಿಕೆ ಎಷ್ಟು ಅಂತ ಕೇಳಿದ್ರೆ ಷಾಕ್‌ ಪಕ್ಕಾ…..!

ಚಾಮರಾಜನಗರ

   ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶ್ರೀಮಲೆ ಮಹದೇಶ್ವರ ಬೆಟ್ಟದಲ್ಲಿ ನಿನ್ನೆ (ಏಪ್ರಿಲ್‌ 29) ಸೋಮವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 34 ದಿನಗಳ ಅವಧಿಯಲ್ಲಿ ಬರೋಬ್ಬರಿ 3.04 ಕೋಟಿ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.

    ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಯಲ್ಲಿ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು.

    ಬಳಿಕ ಸಿ.ಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ರಾತ್ರಿ 11.30 ಗಂಟೆಯವರೆಗೂ ಎಣಿಕೆ ಕಾರ್ಯ ನಡೆದಿದ್ದು, 3.04 ಕೋಟಿ ರೂಪಾಯಿ ಕಾಣಿಕೆ ಸಂಗ್ರಹವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

     ಈ ಬಾರಿ ಯುಗಾದಿ ಜಾತ್ರಾ ಮಹೋತ್ಸವ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೆಚ್ಚಿನ ಭಕ್ತರು ಶ್ರೀಮಲೆ ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೇ ಹರಕೆಯ ರೂಪದಲ್ಲಿ ಹಣ ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ದೇವರ ಹುಂಡಿಗೆ ಅರ್ಪಿಸಿದ್ದಾರೆ.

   ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 3,04,57,246 ರೂಪಾಯಿ ನಗದು ಸಂಗ್ರಹವಾಗಿದೆ. ಚಿನ್ನ 115 ಗ್ರಾಂ ಮತ್ತು ಬೆಳ್ಳಿ 2 ಕೆಜಿ 964 ಗ್ರಾಂ ಸಂಗ್ರಹವಾಗಿದೆ. ಇದಲ್ಲದೇ, ಸಿಂಗಾಪುರ 52 ಡಾಲರ್, 27 ವಿದೇಶಿ ನೋಟುಗಳು, ಚಲಾವಣೆಯಲ್ಲಿ ಇಲ್ಲದ 2,000 ಮುಖಬೆಲೆಯ 22 ನೋಟುಗಳು ಹಾಗೂ ಇ-ಹುಂಡಿಯಲ್ಲಿ 3,53,441 ರೂಪಾಯಿಯನ್ನು ಕಾಣಿಕೆ ರೂಪದಲ್ಲಿ ದೇವರಿಗೆ ನೀಡಿದ್ದಾರೆ.

    ಶ್ರೀಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕ ಅಧೀಕ್ಷಕ ನಾಗೇಶ್, ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap