ದರ್ಶನ್‌ ಮನೆಯಲ್ಲಿ ಸಿಕ್ಕ ಹಣ ಎಷ್ಟು ಗೊತ್ತಾ….?

ಬೆಂಗಳೂರು :

    ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಕ್ಷಣಕ್ಕೊಂದು ತಿರುವುಪಡೆದುಕೊಳ್ಳುತ್ತಿದೆ. ಇನ್ನು ಇಂದು (ಜೂನ್‌ 20) ಪ್ರಕರಣದ ಆರೋಪಿಗಳನ್ನು ಕೋರ್ಟ್‌ಗೆ ಕರೆತರಲಾಗಿದ್ದು, ವಾದ-ಪ್ರತಿವಾದ ಆಲಿಸಿದ ಕೋರ್ಟ್ ನಟ ದರ್ಶನ್‌ನನ್ನು ಮತ್ತೆ ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

   ಅಲ್ಲದೆ ಬಳಿಕ ಆರ್‌.ಆರ್.ನಗರದ ದರ್ಶನ್ ಮನೆಯಲ್ಲಿ ಮತ್ತೆ ಪೊಲೀಸರು ಹಣ ಸೀಜ್‌ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಸೀಜ್‌ ಮಾಡಿದ ಹಣ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

   ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪುನಃ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪೊಲೀಸರ ಪರ ವಕೀಲರು ಮನವಿಯ ನೇರೆಗೆ ಎ2 ಆರೋಪಿ ದರ್ಶನ್ ಜೊತೆಗೆ ಎ9 ಧನರಾಜ್‌, ಎ10 ವಿನಯ್‌, ಎ14 ಪ್ರದೋಶ್‌ರನ್ನು ಅವರನ್ನು ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ನೀಡಿದ್ದು, ಇವರನ್ನು ಮತ್ತ ಹೆಚ್ಚಿನ ವಿಚಾರಣೆಗಾಗು ಅನ್ನಪೂರ್ಣೇಶ್ವರಿನಗರ ಠಾಣೆಗೆ ಕರೆದೊಯ್ಯಲಾಗಿದೆ.

   ಇನ್ನು ಇತ್ತೀಚೆಗಷ್ಟೇ ನಟ ದರ್ಶನ್‌ ಈ ಪ್ರಕರಣ ಮುಚ್ಚಿಹಾಕಲು ಆರೋಪಿಗಳಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದರು ಎನ್ನಲಾಗಿದ್ದು, ಈ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದೀಗ ದರ್ಶನ್ ಮನೆಯ ಬೆಡ್ ರೂಮ್‌ನಲ್ಲಿದ್ದ ಕಬೋರ್ಡ್‌ನಲ್ಲಿ 37,40,000 ರೂಪಾಯಿ ಹಣ ಸೀಜ್ ಮಾಡಲಾಗಿದ್ದು, ಬ್ಯಾಗ್‌ನಲ್ಲಿದ್ದ ಈ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಷ್ಟೇ ಅಲ್ಲದೇ ವಿಜಯಲಕ್ಷ್ಮಿ ಇರುವ ಅಪಾರ್ಟ್ ಮೆಂಟ್‌ನಲ್ಲೂ ಪೊಲೀಸರು 3 ಲಕ್ಷ ರೂಪಾಯಿ ಹಣವನ್ನು ಸೀಜ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

   ಈಗಾಗಲೇ ದರ್ಶನ್ ಆಪ್ತನೊಬ್ಬನ ಮನೆ ಮೇಲೆ ದಾಳಿ ನಡೆಸಿದ್ದ ಪೊಲೀಸರು 30,00,000 ರೂಪಾಯಿ ಡೀಲ್‌ಗೆ ನೀಡಿದ್ದಾರೆ ಎನ್ನಲಾದ ಹಣವನ್ನು ವಶಕ್ಕೆ ಪಡೆದಿದ್ದು, ಇದೀಗ ದರ್ಶನ್ ಮನೆಯಲ್ಲೂ 37 ಲಕ್ಷದ 40 ಸಾವಿರ ರೂಪಾಯಿ ಹಣವನ್ನು ಸೀಜ್ ಮಾಡಿ ವಶಪಡಿಸಿಕಿಂಡಿದ್ದಾರೆ ಎನ್ನಲಾಗಿದೆ. ಇನ್ನು ಈ ಪ್ರಕರಣದಲ್ಲಿ ಪೊಲೀಸರು ಇದುವರೆಗೂ 70,40,000 ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

   ಮತ್ತೊಂದೆಡೆ ಪ್ರಕರಣದ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಸೇರಿದಂತೆ 10 ಜನರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

   ಎಸ್‌ಪಿಪಿ ಪ್ರಸನ್ನ ಕುಮಾರ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳ ಸ್ಯಾಂಪಲ್ ಅನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ಅದರ ರಿಪೋರ್ಟ್ ಬರಬೇಕಿದ್ದು, ಅದರ ಆಧಾರದ ಮೇಲೆ ವಿಚಾರಣೆಯು ಬಾಕಿಯಿದೆ. ಅಲ್ಲದೇ ರೇಣುಕಾಸ್ವಾಮಿ ಮೊಬೈಲ್ ಸಹ ಸಿಕ್ಕಿಲ್ಲ. ಆರೋಪಿಗಳು ಹೇಳಿದ ಜಾಗದಲ್ಲಿ ಮೊಬೈಲ್ ಪತ್ತೆಯಾಗಿಲ್ಲ. ಆದ್ದರಿಂದ ದರ್ಶನ್, ವಿನಯ್, ಪ್ರದೂಶ್ , ನಾಗರಾಜ, ಲಕ್ಷ್ಮಣ್ & ಧನರಾಜ್ ಅವರನ್ನು ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಆದರೆ ದರ್ಶನ್‌ ಸೇರಿ ಧನರಾಜ್‌, ವಿನಯ್‌, ಪ್ರದೋಶ್‌ನನ್ನು ಮಾತ್ರ ಪೊಲೀಸ್‌ ಕಸ್ಟಡಿಗೆ ನೀಡಿದೆ.

   ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂದು ನಟ ದರ್ಶನ್‌ ಮತ್ತು ಗ್ಯಾಂಗ್‌ ಆತನನ್ನು ಬರ್ಬರವಾಗಿದೆ ಹತ್ಯೆ ಮಾಡಿತ್ತು ಎನ್ನುವ ಆರೋಪ ಇತ್ತು. ಕೊನೆಗೆ ಪ್ರಕರಣವನ್ನು ಭೇದಿಸಿದ ಪೊಲೀಸರು ಪ್ರಕರಣದಲ್ಲಿ ನಟ ದರ್ಶನ್‌ನನ್ನು ಎ2 ಆರೋಪಿ, ಪವಿತ್ರಾಗೌಡನನ್ನು ಎ2 ಆರೋಪಿಯನ್ನಾಗಿ ಮಾಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap