ಬೆಂಗಳೂರು:
ಅಕ್ಟೋಬರ್ 29 ರಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ.ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ಇನ್ನು ರಾಜ್ಯದಲ್ಲಿ ಬಿಸಿಲಿನ ತಾಪ ಜಾಸ್ತಿಯಾಗಿದೆ. ಬೆಂಗಳೂರು ನಗರ, ಗ್ರಾಮಾಂತರ, ಶಿವಮೊಗ್ಗ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 1-2 ಡಿಗ್ರಿ ಸೆಲ್ಸಿಯಸ್ ಹೆಚ್ಚಿರುವ ಸಾಧ್ಯತೆ ಇದೆ. ಶಿರಾಲಿಯಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೀದರ್ನಲ್ಲಿ 15.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ