ಮಂಡಿ ಸಂಸದೆ ಭೇಟಿಗೆ ಇರುವ ಕಂಡಿಷನ್‌ ಗೊತ್ತಾ….?

ನವದೆಹಲಿ:

    ಮಂಡಿ ಸಂಸದೆ ಕಂಗನಾ ರಣಾವತ್ ಅವರು, ‘ತಾವು ಪ್ರತಿನಿಧಿಸುವ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಜನರು ತಮ್ಮನ್ನು ಭೇಟಿ ಮಾಡಲು ಬಯಸಿದರೆ, ತಮ್ಮ ಆಧಾರ್ ಕಾರ್ಡ್‌ಗಳನ್ನು ತರಬೇಕು’ ಎಂದು ಹೇಳಿದ್ದಾರೆ. ಅವರ ಈ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದೆ. ಕಂಗನಾ ಮತ್ತು ಬಿಜೆಪಿಯನ್ನು ಕಾಂಗ್ರೆಸ್‌ ತರಾಟೆಗೆ ತೆಗೆದುಕೊಂಡಿದೆ.

   ದೊಡ್ಡ ಸಂಖ್ಯೆಯ ಪ್ರವಾಸಿಗಳು ಮತ್ತು ಹೊರಗಿನವರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಈ ನಿಯಮವನ್ನು ಜಾರಿಗೊಳಿಸುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಮಂಡಿಯಲ್ಲಿ ಇರುವಾಗಲೆಲ್ಲ ನಿಯೋಜಿತ ಸಂವಾದ ಕೇಂದ್ರಗಳಲ್ಲಿ ಸಂದರ್ಶಕರನ್ನು ಭೇಟಿ ಮಾಡಲು ಲಭ್ಯವಿರುವುದಾಗಿ ಅವರು ವಿವರಿಸಿದ್ದಾರೆ.

   ಹಿಮಾಚಲ ಪ್ರದೇಶದ ದೊಡ್ಡ ಸಂಖ್ಯೆಯ ಪ್ರವಾಸಿಗಳನ್ನು ಆಕರ್ಷಿಸುತ್ತಿದೆ. ಆದ್ದರಿಂದ ಮಂಡಿ ಪ್ರದೇಶದ ಒಂದು ಆಧಾರ್ ಕಾರ್ಡ್ ತರುವುದು ಅಗತ್ಯ. ಕ್ಷೇತ್ರದಲ್ಲಿ ನಿಮ್ಮ ಕೆಲಸದ ಸಂಬಂಧದ ವಿವರವನ್ನು ಒಂದು ಪತ್ರದಲ್ಲಿ ಲಿಖಿತವಾಗಿ ನೀಡಬೇಕು. ಆದ್ದರಿಂದ ಯಾವುದೇ ಅನಾನುಕೂಲವಾಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು. ಜುಲೈ 11ರಂದು ನಡೆದ ಸಾರ್ವಜನಿಕ ಸಂವಾದದಲ್ಲಿ, ಸ್ಥಳೀಯ ಪಂಚಾಯ್ತಿ ಹಾಗೂ ವಿಧಾನಸಭೆ ಮಟ್ಟದ ಸಮಸ್ಯೆಗಳಿಗಿಂತ ಹೆಚ್ಚಾಗಿ ರಾಷ್ಟ್ರಮಟ್ಟದ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಂಸದೆಯಾಗಿ ನನ್ನ ಪಾತ್ರವನ್ನು ನಿರ್ವಹಿಸುವುದು ನನ್ನ ಆದ್ಯತೆ” ಎಂದು ತಿಳಿಸಿದ್ದಾರೆ.

   ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಕಂಗನಾ ರಣಾವತ್ ವಿರುದ್ಧ ಸ್ಪರ್ಧಿಸಿ, ಸೋತಿದ್ದ ಕಾಂಗ್ರೆಸ್ ನಾಯಕ, ಹಿಮಾಚಲದ ಹಾಲಿ ಲೋಕೋಪಯೋಗಿ ಸಚಿವ ವಿಕ್ರಮಾದಿತ್ಯ ಸಿಂಗ್ ಅವರು, ಕಂಗನಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಕ್ಷೇತ್ರದ ಜನರು ಅವರನ್ನು ಭೇಟಿ ಮಾಡಲು ಬಯಸಿದರೆ, ಆಧಾರ್ ಕಾರ್ಡ್ ತರುವ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ.

   ಹಾಗಾಗಿ ರಾಜ್ಯದ ಪ್ರತಿಯೊಂದು ವರ್ಗದ ಜನರನ್ನು ಭೇಟಿ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ. ಅದು ಸಣ್ಣ ಕೆಲಸವಾಗಲಿ, ದೊಡ್ಡ ಕೆಲಸವಾಗಲಿ, ನೀತಿ ವಿಷಯವಾಗಲಿ ಅಥವಾ ವೈಯಕ್ತಿಕ ಕೆಲಸವಾಗಲಿ – ಭೇಟಿಗೆ ಯಾವುದೇ ಗುರುತಿನ ಚೀಟಿಯ ಅಗತ್ಯವಿಲ್ಲ. ಒಬ್ಬ ವ್ಯಕ್ತಿ ಸಾರ್ವಜನಿಕ ಪ್ರತಿನಿಧಿಯ ಬಳಿಗೆ ಬರುತ್ತಿದ್ದಾರೆ ಎಂದರೆ, ಅವರು ಯಾವುದೋ ಕೆಲಸಕ್ಕಾಗಿ ಬರುತ್ತಿದ್ದಾರೆ ಎಂದೇ ಅರ್ಥ. ಭೇಟಿಗೆ ಬರುವವರು ಪತ್ರ ಬರೆದುಕೊಂಡು ಬರಬೇಕೆಂದು ಕೇಳುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap