ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ನಾಮಕರಣ :ಹೇಸರೇನು ಗೊತ್ತಾ…?

ಬೆಂಗಳೂರು: 

      ಮುಂದಿನ ಲೋಕಸಭೆ ಚುನಾವಣೆಯಲ್ಲಿ ಶತಾಯಗತಾಯ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್​ ನ್ಯಾಷನಲ್ ಡೆವಲಪ್ ಮೆಂಟ್​​ ಇನ್​ಕ್ಲೂಸಿವ್​​​​ ಅಲೈನ್ಸ್(INDIA)ಎಂದು ನಾಮಕರಣ ಮಾಡಿರುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಘೋಷಿಸಿದ್ದಾರೆ.

     ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ಪ್ರತಿಪಕ್ಷಗಳ ಸಭೆಯ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಭಾರತದ ಪ್ರಜಾಪ್ರಭುತ್ವ ಉಳಿವಿಗೆ ನಮ್ಮ ಹೋರಾಟ ನಡೆಯುತ್ತಿದೆ. ಒಂದೇ ಧ್ವನಿಯಲ್ಲಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದರು,

 
     ದೆಹಲಿಯಲ್ಲಿ ಈ ಬಗ್ಗೆ ನಾವು ನಿರ್ಧಾರ ಕೈಗೊಳ್ಳಲಿದ್ದೇವೆ. ಮುಂಬೈನಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಖರ್ಗೆ ತಿಳಿಸಿದರು.ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದೆ. ಸಂವಿಧಾನವನ್ನು ಕೂಡ ಹಾಳು ಮಾಡುತ್ತಿದೆ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link