ಧಾರವಾಡ:
ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ಪ್ರಜಾಪ್ರತಿನಿಧಿಗಳ ನ್ಯಾಯಾಲಯ ಶಾಕ್ ನೀಡಿದ್ದು, ಚುನಾವಣೆ ಸ್ಪರ್ಧೆ ಮಾಡಬಹುದು.. ಆದರೆ ನಗರ ಪ್ರವೇಶ ಮಾಡುವಂತಿಲ್ಲ ಎಂದು ಹೇಳಿದೆ.
ಧಾರವಾಡದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ನ್ಯಾಯಾಲಯದಲ್ಲಿ ಭಾರೀ ಹಿನ್ನಡೆಯಾಗಿದೆ. ಅವರು ಧಾರವಾಡ ಪವೇಶಿಸಲು ಕೋರಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಮೇ 10ರಂದು ನಡೆಯುವ ಚುನಾವಣೆಗೆ ಈಗಾಗಲೇ ವಿನಯ್ ಕುಲಕರ್ಣಿ ಹೆಸರಿನಲ್ಲಿ ನಾಮಪತ್ರ ಸಲ್ಲಿಕೆಯಾಗಿದೆ. ಬಿಜೆಪಿ ನಾಯಕ ಯೋಗೇಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ. ಈ ಹತ್ಯ್ಎ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿಯನ್ನು ಬಂಧಿಸಲಾಗಿತ್ತು. ಸುಪ್ರೀಂಕೋರ್ಟ್ ಆರೋಪಿಗೆ ಜಾಮೀನು ನೀಡುವಾಗ ಧಾರವಾಡ ಪ್ರವೇಶ ಮಾಡದಂತೆ ಷರತ್ತು ವಿಧಿಸಿದೆ.