ಈ ವರ್ಷ ಹೆಚ್ಚಿನ ಅನುದಾನದ ನಿರೀಕ್ಷೆ ಬೇಡ : ಸಿಎಂ

ಬೆಂಗಳೂರು:

     ಅನುದಾನ ಬಿಡುಗಡೆ ವಿಚಾರದಲ್ಲಿ ಸಚಿವರು ಹಾಗೂ ಶಾಸಕರ ನಡುವೆ ಎದುರಾಗಿರುವ ಭಿನ್ನಾಭಿಪ್ರಾಯಗಳ ನಿವಾರಿಸಲು ನಿನ್ನೆಯಷ್ಟೇ ಸಿದ್ದರಾಮಯ್ಯ ಅವರು,  ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜತೆ ಸಭೆ ನಡೆಸಿದರು.

     ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಈ ವರ್ಷ ತಮ್ಮ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನವನ್ನು ನಿರೀಕ್ಷಿಸಬೇಡಿ ಎಂದು ಪಕ್ಷದ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸೂಚಿಸಿದ್ದಾರೆ.

    ಮುಖ್ಯಮಂತ್ರಿಗಳು ತುಮಕೂರು, ಯಾದಗಿರಿ, ಚಿತ್ರದುರ್ಗ, ಬಾಗಲಕೋಟೆ, ಬಳ್ಳಾರಿ, ಧಾರವಾಡ ಜಿಲ್ಲೆಗಳ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತನಾಡಿದರು.

    ಅಲ್ಲದೆ, ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಕೈಗೊಳ್ಳಲು ಹಣ ಬಿಡುಗಡೆಗೆ ಇನ್ನೂ ಸ್ವಲ್ಪ ಸಮಯ ಕಾಯುವಂತೆ ತಿಳಿಸಿದ್ದಾರೆಂದು ಮೂಲಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ