ನವದೆಹಲಿ :
ಟಿ20 ಕ್ರಿಕೆಟ್ನಲ್ಲಿ ಪಾಕಿಸ್ತಾನ್ (Pakistan) ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಸಹ ಅತೀ ಕಡಿಮೆ ಓವರ್ಗಳಲ್ಲಿ 200+ ರನ್ಗಳನ್ನು ಚೇಸ್ ಮಾಡುವ ಮೂಲಕ ಎಂಬುದು ವಿಶೇಷ. ಆಕ್ಲೆಂಡ್ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಕೇವಲ 16 ಓವರ್ಗಳಲ್ಲಿ 200+ ರನ್ಗಳ ಚೇಸ್ ಮಾಡಿ ಗೆದ್ದು ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ಪರ ಮಾರ್ಕ್ ಚಾಪ್ಮನ್ 44 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 11 ಫೋರ್ಗಳೊಂದಿಗೆ 94 ರನ್ ಬಾರಿಸಿದ್ದರು. ಈ ಸ್ಪೋಟಕ ಅರ್ಧಶತಕದ ನೆರವಿನಿಂದ ನ್ಯೂಝಿಲೆಂಡ್ ತಂಡವು 19.5 ಓವರ್ಗಳಲ್ಲಿ 204 ರನ್ಗಳಿಸಿ ಆಲೌಟ್ ಆಯಿತು.
205 ರನ್ಗಳ ಕಠಿಣ ಗುರಿ ಬೆನ್ನತ್ತಿದ ಪಾಕಿಸ್ತಾನ್ ಪರ ಆರಂಭಿಕ ಆಟಗಾರ ಹಸನ್ ನವಾಝ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 45 ಎಸೆತಗಳನ್ನು ಎದುರಿಸಿದ ಹಸನ್ 7 ಭರ್ಜರಿ ಸಿಕ್ಸ್ ಹಾಗೂ 10 ಫೋರ್ಗಳೊಂದಿಗೆ ಅಜೇಯ 105 ರನ್ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಪಾಕಿಸ್ತಾನ್ ತಂಡ ಕೇವಲ 16 ಓವರ್ಗಳಲ್ಲಿ 207 ರನ್ ಬಾರಿಸಿ 9 ವಿಕೆಟ್ಗಳ ಅಮೋಘ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ 200+ ರನ್ಗಳ ಟಾರ್ಗೆಟ್ ಅನ್ನು ಅತೀ ಕಡಿಮೆ ಓವರ್ಗಳಲ್ಲಿ ಚೇಸ್ ಮಾಡಿದ ವಿಶ್ವ ದಾಖಲೆ ಪಾಕಿಸ್ತಾನ್ ತಂಡದ ಪಾಲಾಯಿತು. ಇದಕ್ಕೂ ಮುನ್ನ ಈ ವರ್ಲ್ಡ್ ರೆಕಾರ್ಡ್ ಸೌತ್ ಆಫ್ರಿಕಾ ತಂಡದ ಹೆಸರಿನಲ್ಲಿತ್ತು.
2007 ರಲ್ಲಿ ವೆಸ್ಟ್ ಇಂಡೀಸ್ ನೀಡಿದ 206 ರನ್ಗಳ ಟಾರ್ಗೆಟ್ ಅನ್ನು ಸೌತ್ ಆಫ್ರಿಕಾ ತಂಡವು ಕೇವಲ 17.4 ಓವರ್ಗಳಲ್ಲಿ ಚೇಸ್ ಮಾಡಿ ಈ ವಿಶ್ವ ದಾಖಲೆ ನಿರ್ಮಿಸಿದ್ದರು.
ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಪಾಕಿಸ್ತಾನ್ ಬ್ಯಾಟರ್ಗಳು ಯಶಸ್ವಿಯಾಗಿದ್ದಾರೆ. ನ್ಯೂಝಿಲೆಂಡ್ ವಿರುದ್ಧ 16 ಓವರ್ಗಳಲ್ಲಿ 207 ರನ್ ಚಚ್ಚಿ ಜಯ ಸಾಧಿಸುವ ಮೂಲಕ ಟಿ20 ಕ್ರಿಕೆಟ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.ಇನ್ನು ಟೀಮ್ ಇಂಡಿಯಾ 200+ ರನ್ಗಳ ಗುರಿಯನ್ನು ಅತೀ ಕಡಿಮೆ ಓವರ್ಗಳಲ್ಲಿ ಚೇಸ್ ಮಾಡಿದ್ದು 2019 ರಲ್ಲಿ. ಅಂದು ವೆಸ್ಟ್ ಇಂಡೀಸ್ ನೀಡಿದ 209 ರನ್ಗಳ ಗುರಿಯನ್ನು ಭಾರತೀಯ ಬ್ಯಾಟರ್ಗಳು 18.4 ಓವರ್ಗಳಲ್ಲಿ ಬೆನ್ನಟ್ಟಿ ಗೆದ್ದು ಬೀಗಿದ್ದರು.
ಇದೀಗ ಸೌತ್ ಆಫ್ರಿಕಾ, ಭಾರತ ಸೇರಿದಂತೆ ಎಲ್ಲಾ ತಂಡಗಳ ಹೆಸರಿನಲ್ಲಿದ್ದ ದಾಖಲೆಯನ್ನು ಹಿಂದಿಕ್ಕುವಲ್ಲಿ ಪಾಕಿಸ್ತಾನ್ ಬ್ಯಾಟರ್ಗಳು ಯಶಸ್ವಿಯಾಗಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಕಡಿಮೆ ಓವರ್ಗಳಲ್ಲಿ 200+ ಸ್ಕೋರ್ ಬೆನ್ನತ್ತಿ ಗೆದ್ದ ವಿಶ್ವ ದಾಖಲೆಯನ್ನು ಪಾಕ್ ಪಡೆ ತನ್ನದಾಗಿಸಿಕೊಂಡಿದೆ.
