ಬಿಎಂಟಿಸಿ ಆರ್ಥಿಕ ಕುಸಿತಕ್ಕೆ ಕಾರಣ ಬಹಿರಂಗ……!

ಬೆಂಗಳೂರು

    ಪ್ರಯಾಣ ದರ ಹೆಚ್ಚಿಸದಿದ್ದಕ್ಕೆ ಮತ್ತು ಕರ್ನಾಟಕ ಸರ್ಕಾರವು  ಆರ್ಥಿಕ ನೆರವು ನೀಡದೆ ಇರುವುದರಿಂದ ಬೆಂಗಳೂರು ಮಹಾನಗರ ಸಾರಿಗೆಯ ಆರ್ಥಿಕ ಪರಿಸ್ಥಿತಿ ಸುಧಾರಿಸಿಲ್ಲ. ಇದು ಬಿಎಂಟಿಸಿ ಆರ್ಥಿಕವಾಗಿ ಕುಸಿಯಲು ಕಾರಣವಾಗಿದೆ ಎಂದು ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕ ಪರಿಶೋಧಕರ (ಸಿಎಜಿ) ವರದಿ ಬಯಲು ಮಾಡಿದೆ.

   ರಿಯಾಯಿತಿ ಪಾಸ್ ಯೋಜನೆಗಳಲ್ಲಿ ಸರ್ಕಾರದ ಪಾಲು ಮರುಪಾವತಿಸಬೇಕು. ಬಿಎಂಟಿಸಿ ಘಟಕಗಳಲ್ಲಿ ಬಸ್‌ಗಳ ಸಮರ್ಪಕ ನಿರ್ವಹಣೆ ಮಾಡದ ಹಿನ್ನೆಲೆಯಲ್ಲಿ ಇಂಜಿನ್‌, ಬ್ಯಾಟರಿ, ಬಿಡಿಭಾಗ ಕಾರ್ಯಕ್ಷಮತೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಇದನ್ನು ಸರಿಪಡಿಸಲು ಸರ್ಕಾರ ಬಿಎಂಟಿಸಿಗೆ ಕಾಲಕಾಲಕ್ಕೆ ಆರ್ಥಿಕ ಬೆಂಬಲ ನೀಡಬೇಕು ಎಂದು ಸಿಎಜಿ ವರದಿ ತಿಳಿಸಿದೆ.
   2014ರಿಂದ ಪ್ರಯಾಣ ದರ ಪರಿಷ್ಕರಿಸದ ಕಾರಣದಿಂದಾಗಿ 649.74 ಕೋಟಿ ಸಂಭಾವ್ಯ ಆದಾಯವನ್ನು ಬಿಎಂಟಿಸಿ ಕಳೆದುಕೊಂಡಿದೆ. ನಿಗಮದ ಬಸ್‌ಗಳ ಪ್ರತಿ ಕಿ.ಮೀ. ಗಳಿಕೆ ವೆಚ್ಚಕ್ಕಿಂತ ಕಡಿಮೆ ಇದೆ. 2017-18ರಲ್ಲಿ ಶೇ.133.59ರಷ್ಟಿದ್ದ ನಿರ್ವಹಣಾ ವೆಚ್ಚದ ಅನುಪಾತ, 2021-22ಕ್ಕೆ ನಿರ್ವಹಣಾ ವೆಚ್ಚದ ಅನುಪಾತ ಶೇ.222.62 ಹೆಚ್ಚಳವಾಗಿದೆ. ಅದರಲ್ಲಿ ಸಿಬ್ಬಂದಿ ವೆಚ್ಚ ಶೇ.60 ಮತ್ತು ಇಂಧನ ವೆಚ್ಚ ಶೇ.27ರಷ್ಟಿದೆ. ಇದೆಲ್ಲವೂ ಬಿಎಂಟಿಸಿ ಸಂಸ್ಥೆ ಆರ್ಥಿಕವಾಗಿ ಕುಸಿಯಲು ಕಾರಣವಾಗಿದೆ ಎಂದು ವರದಿಯಲ್ಲಿದೆ.

Recent Articles

spot_img

Related Stories

Share via
Copy link