ಚಿಕ್ಕಬಳ್ಳಾಪುರ:

ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ ರಾಂ ಜಯಂತಿ ಅಂಗವಾಗಿ `ಸಾಮಾಜಿಕ ನ್ಯಾಯದೆಡೆಗೆ’ ಶೀರ್ಷಿಕೆಯಡಿ ಹಮ್ಮಿಕೊಂಡಿದ್ದ ವಾಕಥಾನ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಚಾಲನೆ ನೀಡಿದರು.
ನಗರದ ಜೈಭೀಮ್ ಬಾಲಕರ ವಿದ್ಯಾರ್ಥಿ ನಿಲಯದಿಂದ ಆರಂಭವಾದ ಜಾಥಾ ಗೌರಿಬಿದನೂರು, ಬಿ.ಬಿ ರಸ್ತೆ ಮೂಲಕ ಜೂನಿಯರ್ ಕಾಲೇಜು ಆವರಣದವರೆಗೆ ಸಾಗಿತು. ಶಾಲೆ, ಕಾಲೇಜಿನ ಮೂರು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.
ಪ್ರಮಾಣ ವಚನ ಬೋಧಿಸಲಾಯಿತು. ಜಿಲ್ಲಾಧಿಕಾರಿ ಆರ್. ಲತಾ, ಜಿಪಂ ಸಿಇಒ ಪಿ. ಶಿವಶಂಕರ್, ಎಸ್ಪಿ ಮಿಥುನ್ ಕುಮಾರ್, ಮಾವು ಮತ್ತು ಮಾರುಕಟ್ಟೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ವಿ. ನಾಗರಾಜ್, ಕಸಾಪ ಜಿಲ್ಲಾಧ್ಯಕ್ಷ ಕೋಡಿರಂಗಪ್ಪ, ನಗರಸಭೆ ಅಧ್ಯಕ್ಷ ಆನಂದರೆಡ್ಡಿಬಾಬು ಮತ್ತಿತರರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








