ಬಳ್ಳಾರಿ:
ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ರಾಜ್ಯ ಸರ್ಕಾರದಿಂದ ನಿರ್ಮಿಸಲಾಗಿರುವ ಪ್ರತಿ ನಿಮಿಷಕ್ಕೆ 500 ಲೀಟರ್ ಸಾಮಥ್ರ್ಯದ ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಕ್ಕೆ ರಾಜ್ಯಸಭೆ ಸದಸ್ಯ ಡಾ. ಸೈಯದ್ ನಾಸೀರ್ ಹುಸೇನ್, ನಗರ ಶಾಸಕ ಜಿ.ಸೋಮಶೇಖರರೆಡ್ಡಿ ಗುರುವಾರ ಚಾಲನೆ ನೀಡಿದರು.
ಇದೇ ವೇಳೆ ಪಿಎಂ ಕೇರ್ಸ್ ಫಂಡ್ ಅನುದಾನದಡಿ ವಿಮ್ಸ್‍ನಲ್ಲಿ ಪ್ರತಿಷ್ಠಾಪಿಸಲಾಗಿರುವ ಆಕ್ಸಿಜನ್ ಉತ್ಪಾದನಾ ಘಟಕ (ನಿಮಿಷಕ್ಕೆ 1 ಸಾವಿರ ಲೀಟರ್ ಉತ್ಪಾದನೆ)ಕ್ಕೂ ಕೂಡ ಚಾಲನೆ ನೀಡಲಾಯಿತು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ ಅವರು ಆಕ್ಸಿಜನ್ ಪ್ಲಾಂಟ್ ಉದ್ಘಾಟನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸರ್ಕಾರದಿಂದ ರೂ.80 ಲಕ್ಷ ವೆಚ್ಚದಲ್ಲಿ ಈ ಘಟಕ ಶುರು ಮಾಡಲಾಗಿದೆ. ಇದೊಂದು ಜನರಲ್ ಆಕ್ಸಿಜನ್ ಫ್ಲಾಂಟ್, ಈ ಘಟಕದಿಂದ ಜಿಲ್ಲಾಸ್ಪತ್ರೆಯ ಸಾಮಾನ್ಯ ಹಾಗೂ 7 ಜನ ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಪೂರೈಸಲಾಗುತ್ತಿದೆ ಎಂದು ತಿಳಿಸಿದರು.
ಮೂರನೇ ಅಲೆಯನ್ನು ತಡೆಯುವ ಉದ್ದೇಶದಿಂದ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಶುರು ಮಾಡಲಾಗುತ್ತಿದೆ. ಹೂವಿನಹಡಗಲಿ ತಾಲೂಕಿನಲ್ಲಿ ಇಂದು ಆಕ್ಸಿಜನ್ ಫ್ಲ್ಲಾಂಟ್ ಉದ್ಘಾಟನೆಯಾಗಿದ್ದು, ಮುಂದಿನ ದಿನಗಳಲ್ಲಿ ಸಿರುಗುಪ್ಪ, ಹೊಸಪೇಟೆ, ಕೂಡ್ಲಿಗಿ, ಹರಪನಹಳ್ಳಿ ಸೇರಿದಂತೆ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಘಟಕ ಶುರುವಾಗಲಿದೆ. ಜಿಲ್ಲಾಸ್ಪತ್ರೆಯ ಘಟಕವು ದಿನದ 24 ಗಂಟೆಯೂ ಆಕ್ಸಿಜನ್ ಉತ್ಪಾದಿಸಲಿದ್ದು, ಇದರ ಬಳಕೆಯ ಕುರಿತು ಆಸ್ಪತ್ರೆಯ ಸಿಬ್ಬಂದಿಗೆ ಈಗಾಗಲೇ ಎಲ್ಲ ರೀತಿಯ ತರಬೇತಿ ನೀಡಲಾಗಿದೆ ಎಂದು ಅವರು ವಿವರಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ವೀರಶೇಖರ್ ರೆಡ್ಡಿ, ಮಹಾನಗರ ಪಾಲಿಕೆ ಸದಸ್ಯ ಶ್ರೀನಿವಾಸ್ ಮೋತ್ಕರ್, ಡಾ.ವಿಶ್ವನಾಥ, ನರ್ಸಿಂಗ್ ಸೂಪರಿಡೆಂಟ್ ರಾಜೇಶ್ವರಿ ಮತ್ತು ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.
ಬಳ್ಳಾರಿ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ರಾಜ್ಯ ಸರ್ಕಾರದಿಂದ ನಿರ್ಮಿಸಲಾಗಿರುವ ಪ್ರತಿ ನಿಮಿಷಕ್ಕೆ 500 ಲೀಟರ್ ಸಾಮಥ್ರ್ಯದ ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಕ್ಕೆ ರಾಜ್ಯಸಭೆ ಸದಸ್ಯ ಡಾ. ಸೈಯದ್ ನಾಸೀರ್ ಹುಸೇನ್, ನಗರ ಶಾಸಕ ಜಿ.ಸೋಮಶೇಖರರೆಡ್ಡಿ ಗುರುವಾರ ಚಾಲನೆ ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ