ಬೆಂಗಳೂರು:
ರಾಜ್ಯದಲ್ಲಿ ಸ್ವಾಮಿತ್ವ ಯೋಜನೆಯಡಿ ಗ್ರಾಮೀಣ ವಸತಿ ಹಕ್ಕು ದಾಖಲೆ, ಕೃಷಿ ಭೂಮಿ ಹಕ್ಕು ದಾಖಲೆ ಹಾಗೂ ಪಟ್ಟಣ, ನಗರ ಆಸ್ತಿಗಳ ದಾಖಲೆಗಳನ್ನು ಸಿದ್ಧಪಡಿಸುವುದಕ್ಕಾಗಿ ಕೆಟಿಪಿಪಿ ಕಾಯ್ದೆ ಅನುಸರಿಸಿ ಅರ್ಹ ಖಾಸಗಿ ಏಜೆನ್ಸಿಗಳಿಂದ ಡ್ರೋನ್ ಅಥವಾ ವೈಮಾನಿಕ ಸಮೀಕ್ಷೆ ನಡೆಸಲು ಉದ್ದೇಶಿಸಲಾಗಿದೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಯೋಜನೆಯನ್ನು 287 ಕೋ. ರೂ.ಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ