ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ 2017-18 ನೇ ಸಾಲಿನ 55 ನೇ ವರ್ಷದ ಸರ್ವ ಸದಸ್ಯರ ಸಭೆಯಲ್ಲಿ ಶಿವಗಂಗ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಉತ್ತಮ ಹಾಗೂ ಪಾರದರ್ಶಕ ಆಡಳಿತ ನಡೆಸುತ್ತಿರುವ ಶಿವಗಂಗ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಪ್ರತಿ ವರ್ಷವೂ ಸತತವಾಗಿ ಲಾಭದಲ್ಲಿ ಮುನ್ನಡೆಯುತ್ತಿರುವುದಲ್ಲದೆ ರೈತಾಪಿ ವರ್ಗಕ್ಕೆ ಸಾಲ ನೀಡಿ ಸಂಘವನ್ನು ಸುಸ್ಥಿತಿಯತ್ತ ಕೊಂಡೊಯ್ಯುತ್ತಿರುವುದರಿಂದ ಪ್ರತಿ ವರ್ಷವೂ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುತ್ತಿರುವುದು ನಿಜಕ್ಕೂ ಇತರೆ ಸಹಕಾರ ಸಂಘಗಳಿಗೆ ಮಾದರಿಯಾಗಿದೆ ಎಂದು ಪ್ರಶಸ್ತಿ ವಿತರಿಸಿದ ಮಾಜಿ ಶಾಸಕ ಹಾಗೂ ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ ಡಿ.ಸುಧಾಕರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಶಿವಗಂಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ದಗ್ಗೆಶಿವಪ್ರಕಾಶ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಸಿ.ನಾಗರಾಜ್ ಇವರುಗಳು ಪ್ರಶಸ್ತಿಯನ್ನು ಸ್ವೀಕರಿಸಿದರು.
ತಾಳ್ಯ, ಜಾನಕಲ್, ಸಿರಿಗೆರೆ, ಕೊಳಾಳ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಇದೇ ಸಂದರ್ಭದಲ್ಲಿ ಪ್ರಶಸ್ತಿ ನೀಡಲಾಯಿತು.ಡಿ.ಸಿ.ಸಿ.ಬ್ಯಾಂಕ್ ಉಪಾಧ್ಯಕ್ಷ ಮಹಂತೇಶ್, ನಿರ್ದೇಶಕರುಗಳಾದ ಹೆಚ್.ಬಿ.ಮಂಜುನಾಥ್, ನಿಶಾನಿ ಜಯಣ್ಣ, ವ್ಯವಸ್ಥಾಪಕ ನಿರ್ದೇಶಕ ಇಲಿಯಾಜ್‍ವುಲ್ಲಾ ಷರೀಫ್, ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ