ಹಿರಿಯ ನಟ ದ್ವಾರಕೀಶ್‌ ವಿಧಿವಶ …..!

ಬೆಂಗಳೂರು : 

    ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ವಿಧಿವಶರಾಗಿದ್ದಾರೆ. ಈ ಬಗ್ಗೆ ಕುಟುಂಬಸ್ಥರು ಮಾಹಿತಿಯನ್ನು ಮಾದ್ಯಮದೊಂದಿಗೆ ಹಂಚಿಕೊಂಡಿದ್ದಾರೆ. ಇವರು ಅಪಾರವಾಗಿ ಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ.

    ದ್ವಾರಕೀಶ್ ಅವರಿಗೆ ಆರೋಗ್ಯ ಸರಿಯಾಗಿರಲಿಲ್ಲ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗಿನ ಜಾವ ಹೃದಯಾಘಾತದಿಂದ ಅವರು ನಿಧನರಾಗಿದ್ದಾರೆ. ಕನ್ನಡದ ಹಿರಿಯ ನಟ ದ್ವಾರಕೀಶ್ ಅವರಿಗೆ 81 ವಯಸ್ಸಾಗಿತ್ತು. ನಿರ್ದೇಶಕ, ನಿರ್ಮಾಪಕ, ನಟರಾಗಿ ಕೆಲಸ ಮಾಡಿದ ದ್ವರಕೀಶ್ ವಿಧಿವಶರಾಗಿದ್ದಾರೆ.

    ಸ್ಯಾಂಡಲ್‌ವುಡ್‌ನ ಹಿರಿಯ ನಟ ದ್ವಾರಕೀಶ್‌ ಅವರು ಕನ್ನಡ ಚಿತ್ರರಂಗದಲ್ಲಿ ಬಹುದೊಡ್ಡ ಹೆಸರು. ಹಲವಾರು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಅವರನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್‌ ನೀಡಿದೆ.

    ನಟರಾಗಿ, ನಿರ್ದೇಶಕ, ನಿರ್ಮಾಪಕರಾಗಿ ಹಲವಾರು ಚಿತ್ರಗಳ ಕೊಡುಗೆ ನೀಡಿರುವ ಅವರು ಕನ್ನಡ ಚಿತ್ರರಂಗಕ್ಕೆ ಕಲಾಸೇವೆ ಸಲ್ಲಿಸಿದ್ದಾರೆ. ಡಾ. ವಿಷ್ಣುವರ್ಧನ್‌, ಡಾ. ರಾಜ್‌ಕುಮಾರ್‌ ಹಾಗೂ ಅಂಬರೀಶ್‌ರಂತಹ ಮೇರು ನಟರೊಂದಿಗೆ ಹಿರಿಯ ತೆರೆಯಲ್ಲಿ ಮಿಂಚಿರುವ ನಟ ದ್ವಾರಕೀಶ್‌ ಅವರು ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಬರೋಬ್ಬರಿ 40ಕ್ಕೂ ಹೆಚ್ಚು ಸಿನಿಮಾಗಳ ನಿರ್ಮಾಣ ಮಾಡಿ ಸೈ ಎನಿಸಿಕೊಂಡಿರುವ ಅವರು ಕನ್ನಡ ಜನತೆಗೆ ಜನಪ್ರಿಯ ರಾಜಕುಳ್ಳ ಎಂದೇ ಜನಪ್ರಿಯರು.

     ದ್ವಾರಕೀಶ್ ಆಗಸ್ಟ್ 19 1942 ಹುಣಸೂರಿನಲ್ಲಿ ಶಮಾರಾವ್ ಮತ್ತು ಜಯಮ್ಮ ದಂಪತಿಗೆ ಜನಿಸಿದ್ದರು. ಮೈಸೂರಿನ ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನಂತರ ಸಿಪಿಸಿ ಪಾಲಿಟೆಕ್ನಿಕ್‌ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್ ಮುಗಿಸಿದ್ದರು. ನಂತರ ಅವರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಶುರುಮಾಡಿದ್ದ ದ್ವಾರಕೀಶ್‌ 1963 ರಲ್ಲಿ ಅವರು ವ್ಯಾಪಾರ ಬಿಟ್ಟು ಸಿನೆಮಾ ನಟನೆಯನ್ನು ಆಯ್ದುಕೊಂಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap