ಇದ್ದಕ್ಕಿದ್ದಂತೆ ಹೊತ್ತಿ ಉರಿದ ಇ-ಸ್ಕೂಟರ್

ಚಾಮರಾಜನಗರ:

ಇತ್ತೀಚಿನ ದಿನಗಳಲ್ಲಿ ಇ-ಸ್ಕೂಟರ್ಗಳತ್ತ ಜನರು ಹೆಚ್ಚು ವಾಲುತ್ತಿದ್ದಾರೆ. ಅದೇ ರೀತಿ, ಕೆಲವೆಡೆ ಇ-ಸ್ಕೂಟರ್ ನಿಂದ ಅವಘಡಗಳು ಕೂಡ ಸಂಭವಿಸುತ್ತಿವೆ. ಇದೀಗ ಮನೆ ಮುಂದೆ ನಿಲ್ಲಿಸಿದ್ದ ಎಲೆಕ್ಟ್ರಿಕ್ ಸ್ಕೂಟರ್ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಘಟನೆ ಚಾಮರಾಜನಗರದ ಮುಬಾರಕ್ ಮೊಹಲ್ಲಾದಲ್ಲಿ ತಡರಾತ್ರಿ ನಡೆದಿದೆ.

ಮುಬಾರಕ್ ಮೊಹಲ್ಲಾ ನಿವಾಸಿ ಅಸಾದುಲ್ಲಾ ಎಂಬವರು ತಮ್ಮ ಮನೆ ಮುಂದೆ ನಿಲ್ಲಿಸಿದ್ದ ಇ-ಸ್ಕೂಟರ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡಿದೆ.

ನೋಡ ನೋಡುತ್ತಿದ್ದಂತೆ ಬೆಂಕಿ ವ್ಯಾಪಿಸಿ ಹೊತ್ತಿ ಉರಿದಿದ್ದು, ಸ್ಥಳೀಯರು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಕೆಲ ತಿಂಗಳುಗಳ ಹಿಂದೆ ಚಾಮರಾಜನಗರ ತಾಲೂಕಿನ ಅರಕಲವಾಡಿ ಗ್ರಾಮದಲ್ಲಿ ಚಾರ್ಜ್ ಮಾಡಿ‌ ನಿಲ್ಲಿಸಿದ್ದ ಇ-ಸ್ಕೂಟರ್ವೊಂದು ಹೊತ್ತಿ ಉರಿದು ಆತಂಕ ಸೃಷ್ಟಿಸಿತ್ತು. ಮುಬಾರಕ್ ಮೊಹಲ್ಲಾದಲ್ಲಿ ನಡೆದ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Recent Articles

spot_img

Related Stories

Share via
Copy link
Powered by Social Snap