ನವದೆಹಲಿ:
ಉತ್ತರ ಭಾರತದಲ್ಲಿ ಇಂದು ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.3ರಷ್ಟು ತೀವ್ರತೆ ದಾಖಲಾಗಿದೆ ಎಂದು ತಿಳಿದುಬಂದಿದೆ.ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆ ಸೇರಿ ಉತ್ತರ ಭಾರತದ ಕೆಲವೆಡೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 5.3ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಮೂಲಗಳ ಪ್ರಕಾರ ಇಂದು ರಾತ್ರಿ 9.34ರ ಸುಮಾರಿಗೆ ಭೂಕಂಪ ಸಂಭವಿಸಿದ್ದು, ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆ ಸೇರಿದಂತೆ, ಚಂಡೀಗಡ ಸೇರಿದಂತೆ ಪಂಜಾಬ್ ಮತ್ತು ಹರಿಯಾಣದ ಕೆಲ ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಕೆಲವು ಸೆಕೆಂಡುಗಳ ಕಾಲ ಕಂಪನ ಸಂಭವಿಸಿದೆ.
