ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ‘ಕರ್ನಾಟಕ ರಾಜ್ಯ ವಿಧಾನಸಭೆಗೆ ಏಪ್ರಿಲ್ ಮತ್ತು ಮೇ ತಿಂಗಳ ನಡುವೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಕೇಂದ್ರ ಚುನಾವಣಾ ಆಯೋಗದಿಂದ ಈಗಿನಿಂದ ಯಾವ ಕ್ಷಣದಲ್ಲಾದರೂ ಚುನಾವಣೆ ಘೋಷಣೆ ಆಗಬಹುದು. ಹೀಗಾಗಿ ಕೆಲವು ಮಾಡಲೇಬೇಕಾದ ಚುನಾವಣಾ ಪೂರ್ವ ಸಿದ್ಧತೆಯನ್ನು ಕಡ್ಡಾಯವಾಗಿ ಚುನಾವಣೆ ಘೋಷಣೆಗೆ ಮುನ್ನವೇ ಮಾಡಿ ಮುಗಿಸಬೇಕು’ ಎಂದು ಸೂಚಿಸಲಾಗಿದೆ.
ಅಲ್ಲದೇ, ಇದರೊಂದಿಗೆ ಚುನಾವಣಾ ನೀತಿ ಸಂಹಿತೆಯ ಮಾದರಿ ಜಾರಿ ಸ್ವರೂಪವನ್ನು ಲಗತ್ತಿಸಲಾಗಿದ್ದು, ಚುನಾವಣೆ ಘೋಷಣೆಯಾದ ತತ್‌ಕ್ಷಣದಿಂದ ಜಿಲ್ಲಾ ಚುನಾವಣಾ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ಇನ್ನು ಮಾರ್ಚ್ 27 ಅಥವಾ 28ರಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದ್ದು, ಈಗಾಗಲೇ ಒಂದು ಹಂತದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಚುನಾವಣಾ ಪೂರ್ವ ತಯಾರಿಗಳನ್ನು ಮಾಡಲಾಗ್ತಿದೆ.