ಬೆಂಗಳೂರು
ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿರುವಾಗ ಎಲ್ಲ ರಾಜಕೀಯ ಪಕ್ಷಗಳು ಅಬ್ಬರ ಪ್ರಚಾರವನ್ನು ನಡೆಸಲು ಶುರು ಮಾಡಿವೆ . ಈ ನಡುವೆ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಅವರಿಗೆ ಆಟೋ ರಿಕ್ಷಾ ಚಿಹ್ನೆ ಲಭಿಸಿದೆ.
ಈ ಕುರಿತು ಚುನಾವಣಾ ಆಯೋಗ ಆದೇಶ ಹೊರಡಿಸಿದ್ದು, ಚುನಾವಣಾ ಆಯೋಗದ ಆದೇಶವನ್ನು ನಟ ಹಾಗೂ ರಾಜಕಾರಣಿ ಉಪೇಂದ್ರ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ
.
ಉತ್ತಮ ಪ್ರಜಾಕೀಯ ಪಕ್ಷಕ್ಕೆ ಈ ಬಾರಿಯ 2023 ವಿಧಾನಸಭಾ ಚುನಾವಣೆಗೆ ಕಾಮನ್ ಸಿಂಬಲ್ “ಆಟೋ ರಿಕ್ಷಾ ” ಚಿಹ್ನೆ ಲಭಿಸಿದೆ. ಎಲ್ಲರಿಗೂ ಶುಭಾಶಯಗಳು ಎಂದು ಉಪೇಂದ್ರ ಟ್ವೀಟ್ ಮೂಲಕ ಹೇಳಿದ್ದಾರೆ.ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಉತ್ತಮ ಪ್ರಜಾಕೀಯ ಪಕ್ಷದಿಂದ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳಿಗೆ ಆಟೋ ರಿಕ್ಷಾವನ್ನು ಸಾಮಾನ್ಯ ಚಿಹ್ನೆ ಎಂದು ಚುನಾವಣಾ ಆಯೋಗ ನಿಗದಿಪಡಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ