ತುಮಕೂರು:
ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಹಾಗೂ ಹಣಕಾಸಿನ ನೆರವು ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಫೆ.೧೭ರ ಶನಿವಾರ ಸಂಜೆ ೪ ಗಂಟೆಗೆ ತುಮಕೂರಿನ ಅರ್ಬನ್ ರೆಸಾರ್ಟ್‌ನಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಶಾಸಕ ಜಿ.ಬಿ.ಜ್ಯೋತಿಗಣೇಶ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಗೌರವ ಅತಿಥಿಗಳಾಗಿ ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ ವ್ಯವಸ್ಥಾಪಕ ನಿರ್ದೇಶಕ ಬಿ.ಮಹೇಶ್, ಕೆನರಾ ಬ್ಯಾಂಕ್ ಪ್ರಾದೇಶಿಕ ಮುಖ್ಯಸ್ಥ ಡಿ.ರವಿ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಗಿರೀಶ್ ಟಿ.ಜೆ., ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಡಿ.ಕೆ.ಲಿಂಗರಾಜು, ಸಿಡ್ಬಿ ಬೆಂಗಳೂರು ಪ್ರಾದೇಶಿಕ ಕಚೇರಿ ಉಪ ಪ್ರದಾನ ವ್ಯವಸ್ಥಾಪಕ ಉಳಗಿಯನ್, ವಿಟಿಪಿಸಿ ಉಪನಿರ್ದೇಶಕ ಮನ್ಸೂರ್ ಭಾಗವಹಿಸಲಿದ್ದು, ಕಾಸಿಯಾ ಅಧ್ಯಕ್ಷ ಸಿ.ಎ.ಶಶಿಧರ ಶೆಟ್ಟಿ ಅಧ್ಯಕ್ಷತೆ ವಹಿಸುವರು. ತುಮಕೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಜಿಲ್ಲಾ ರೈಸ್ ಮಿಲ್ ಅಸೋಸಿಯೇಷನ್ ವಸಂತ ನರಸಾಪುರ ಕೈಗಾರಿಕೆಗಳ ಸಂಘ, ಜಿಲ್ಲಾ ಗ್ರಾನೈಟ್ ಕೈಗಾರಿಕೆಗಳ ಸಂಘ, ಇಂಡಸ್ಟ್ರಿಯಲಿಸ್ಟ್ ಅಸೋಸಿಯೇಷನ್, ಕುಣಿಗಲ್ ಸಣ್ಣ ಕೈಗಾರಿಕೆಗಳ ಸಂಘ, ಹಿರೇಹಳ್ಳಿ ಕೈಗಾರಿಕೆಗಳ ಸಂಘ, ಕೆ.ಎಸ್.ಎಸ್.ಐ.ಡಿ.ಸಿ., ಪ್ರದೇಶ ಕೈಗಾರಿಕೆಗಳ ಸಂಘ ಬಟವಾಡಿ, ಕೆ.ಎಸ್.ಎಸ್.ಐ.ಡಿ.ಸಿ. ಯಲ್ಲಾಪುರ ಇವರುಗಳ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ