ಹಿರೋ ಮೋಟಾರ್‌ ಕಾರ್ಪ್‌ ಸಿಎಂಡಿ ಮೇಲೆ ಇಡಿ ದಾಳಿ…..!

ನವದೆಹಲಿ:

      ಹೀರೋ ಮೋಟೋಕಾರ್ಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಪವನ್ ಕುಮಾರ್ ಮುಂಜಾಲ್ ವಿರುದ್ಧ ಜಾರಿ ನಿರ್ದೇಶನಾಲಯವು ಇಂದು ಧನ್ತೇರಸ್ ಮೇಲೆ ಮಹತ್ವದ ಕ್ರಮ ಕೈಗೊಂಡಿದೆ. 

    ಸದ್ಯ ದೊರೆತಿರುವ  ಮಾಹಿತಿಯ ಪ್ರಕಾರ, ದೆಹಲಿಯಲ್ಲಿರುವ ಪವನ್ ಮುಂಜಾಲ್ ಅವರ ಮೂರು ಆಸ್ತಿಗಳನ್ನು ವಶಪಡಿಸಿಕೊಂಡಿದೆ. ಇವರ ಬೆಲೆ ಸುಮಾರು 25 ಕೋಟಿ ಎಂದು ಹೇಳಲಾಗುತ್ತಿದೆ. ಮನಿ ಲಾಂಡರಿಂಗ್‌ಗೆ ಸಂಬಂಧಿಸಿದಂತೆ ಇಡಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

     ಜಾರಿ ನಿರ್ದೇಶನಾಲಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಈ ಮಾಹಿತಿ ನೀಡಿದೆ. ಹೀರೋ ಮೋಟೋಕಾರ್ಪ್ ವಿರುದ್ಧ ಇಡಿ ತೆಗೆದುಕೊಂಡ ಕ್ರಮವು ಮನಿ ಲಾಂಡರಿಂಗ್ ಅಡಿಯಲ್ಲಿ ಬರುತ್ತದೆ ಎಂದು ಬರೆದಿದೆ. ಇಡಿ ಇತ್ತೀಚಿನ ಕ್ರಮದಲ್ಲಿ ಜಪ್ತಿ ಮಾಡಿರುವ ಆಸ್ತಿಗಳ ಮೌಲ್ಯ ಸುಮಾರು 25 ಕೋಟಿ ರೂಪಾಯಿ ಆಗಿದೆ. ಇದಕ್ಕೂ ಮುನ್ನ ಪವನ್ ಮುಂಜಾಲ್ ಅವರ ಆಸ್ತಿಯನ್ನು ಜಪ್ತಿ ಮಾಡಲಾಗಿದ್ದು, ಅವರ ಮೌಲ್ಯ ಸುಮಾರು 50 ಕೋಟಿ ರೂಪಾಯಿ ಆಗಿದೆ.

ಇದಕ್ಕೂ ಮೊದಲು ಆಗಸ್ಟ್‌ನಲ್ಲಿಯೂ ಮುಂಜಾಲ್ ಮತ್ತು ಅವರ ಕಂಪನಿಗಳ ವಿರುದ್ಧ ಪಿಎಂಎಲ್‌ಎ ಅಡಿಯಲ್ಲಿ ಪ್ರಕರಣ ದಾಖಲಿಸಿದ ನಂತರ ಇಡಿ ದಾಳಿ ನಡೆಸಿತ್ತು. ಭಾರತದಿಂದ ಅಕ್ರಮವಾಗಿ ವಿದೇಶಿ ಕರೆನ್ಸಿಯನ್ನು ಸಾಗಿಸಿದ ಆರೋಪದಡಿ ರೆವಿನ್ಯೂ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಚಾರ್ಜ್ ಶೀಟ್ ಅನ್ನು ಪಡೆದುಕೊಂಡ ನಂತರ ಪ್ರಕರಣವನ್ನು ದಾಖಲಿಸಲಾಗಿದೆ. ‘ಪ್ರಾಸಿಕ್ಯೂಷನ್ ಸಲ್ಲಿಸಿರುವ ದೂರಿನಲ್ಲಿ 54 ಕೋಟಿ ರೂಪಾಯಿ ಮೌಲ್ಯದ ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ಭಾರತದಿಂದ ಹೊರಕ್ಕೆ ಕೊಂಡೊಯ್ಯಲಾಗಿದೆ ಎಂದು ಆರೋಪಿಸಲಾಗಿದೆ’ ಎಂದು ಇಡಿ ಹೇಳಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap