ನವದೆಹಲಿ:
ಆನ್‌ಲೈನ್ ಬೆಟ್ಟಿಂಗ್‌ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗರಾದ ರಾಬಿನ್ ಉತ್ತಪ್ಪ, ಯುವರಾಜ್ ಸಿಂಗ್ ಮತ್ತು ನಟ ಸೋನು ಸೂದ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ.1 ಎಕ್ಸ್ ಬೆಟ್ ಎಂಬ ಪ್ಲಾಟ್ ಫಾರ್ಮ್ ಗೆ ಸಂಬಂಧಿಸಿದ ಪ್ರಕರಣದಲ್ಲಿ ಮುಂದಿನ ವಾರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ತಮ್ಮ ಹೇಳಿಕೆಗಳನ್ನು ದಾಖಲಿಸುವಂತೆ ಉತ್ತಪ್ಪ (39), ಯುವರಾಜ್ ಸಿಂಗ್ (43) ಮತ್ತು ಸೋನು ಸೂದ್ (52) ಅವರಿಗೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತಪ್ಪ ಅವರಿಗೆ ಸೆಪ್ಟೆಂಬರ್ 22 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದ್ದರೆ, ಯುವರಾಜ್ ಸಿಂಗ್ ಅವರನ್ನು ಸೆಪ್ಟೆಂಬರ್ 23 ರಂದು ಮತ್ತು ಸೂದ್ ಅವರನ್ನು ಸೆಪ್ಟೆಂಬರ್ 24 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ತನಿಖೆಯ ಭಾಗವಾಗಿ ಫೆಡರಲ್ ತನಿಖಾ ಸಂಸ್ಥೆ ಕಳೆದ ಕೆಲವು ವಾರಗಳಿಂದ ಮಾಜಿ ಕ್ರಿಕೆಟಿಗರಾದ ಸುರೇಶ್ ರೈನಾ ಮತ್ತು ಶಿಖರ್ ಧವನ್ ಅವರನ್ನು ವಿಚಾರಣೆ ನಡೆಸಿದೆ. ಈ ಪ್ರಕರಣದಲ್ಲಿ ಟಿಎಂಸಿಯ ಮಾಜಿ ಸಂಸದ ಮತ್ತು ನಟಿ ಮಿಮಿ ಚಕ್ರವರ್ತಿ ಅವರ ಹೇಳಿಕೆಯನ್ನು ಸೋಮವಾರ ದಾಖಲಿಸಲಾಗಿದೆ.
ಬಂಗಾಳಿ ನಟ ಅಂಕುಶ್ ಹಜ್ರಾ ಅವರು ಮಂಗಳವಾರ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾದರು, ಆದರೆ 1xBetನ ಭಾರತದ ಬ್ರಾಂಡ್ ಅಂಬಾಸಿಡರ್ ನಟಿ ಊರ್ವಶಿ ರೌಟೆಲಾ ಅವರು ಮಂಗಳವಾರ ನಿಗದಿತ ದಿನಾಂಕದಂದು ಇನ್ನೂ ಹಾಜರಾಗಿಲ್ಲ ಎಂದು ಮೂಲಗಳು ತಿಳಿಸಿವೆ.
