ನವದೆಹಲಿ:
ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ದೆಹಲಿ ಸಚಿವ ಕೈಲಾಶ್ ಗಹ್ಲೋಟ್ ಅವರಿಗೆ ಸಮನ್ಸ್ ನೀಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ನಜಾಫ್‌ಗಢದ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರಾಗಿರುವ ಗಹ್ಲೋಟ್ (49) ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದಲ್ಲಿ ಸಾರಿಗೆ, ಗೃಹ ಮತ್ತು ಕಾನೂನು ಸಚಿವರಾಗಿದ್ದಾರೆ.
ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮತ್ತು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುವುದು ಎಂದು ಇ.ಡಿ ಗಹ್ಲೋಟ್‌ಗೆ ತಿಳಿಸಿರುವುದಾಗಿ ಮೂಲಗಳು ತಿಳಿಸಿವೆ.