ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಹಬ್ಬದ ಸಂಭ್ರಮ

ಬೆಂಗಳೂರು:

    ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಹಬ್ಬವನ್ನು ಪ್ರತಿವರ್ಷ ಸಡಗರದಿಂದ ಆಚರಿಸಲಾಗುತ್ತದೆ. ಈ ವರ್ಷ ಕೂಡ ಅದ್ದೂರಿಯಾಗಿ ವೈಕುಂಠ ಏಕಾದಶಿಯನ್ನು ಬರ ಮಾಡಿಕೊಳ್ಳಲಾಗುತ್ತಿದ್ದು, ನಗರದ ದೇವಸ್ಥಾನಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

    ಮಲ್ಲೇಶ್ವರದ ಟಿಟಿಡಿ ದೇವಸ್ಥಾನದಲ್ಲಂತೂ ಸಂಭ್ರಮ ಮುಗಿಲುಮುಟ್ಟಿದೆ. ವೈಕುಂಠ ಏಕಾದಶಿ ಪ್ರಯುಕ್ತವಾಗಿಯೇ ದೇವಸ್ಥಾನದ ಸುತ್ತಲೂ ದಕ್ಷಿಣ ಶೈಲಿಯ ಚಪ್ಪರ ಹಾಕಿ ಹೂವಿನಿಂದ ಅಲಾಂಕಾರ ಮಾಡಲಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ವಿಶೇಷ ಪೂಜೆ ಆರಂಭವಾಗಿದೆ. ವೆಂಕಟೇಶ್ವರನಿಗೆ ಪಂಚಾಭಿಷೇಕ, ಪುಷ್ಪಭಿಷೇಕ ಮಾಡಿ ನಂತರ ವಿಶೇಷ ಅಲಂಕಾರ ಮಾಡಿ ಭಕ್ತದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.

    ದೇಗುಲಕ್ಕೆ ಬಂದ ಭಕ್ತರಿಗೆ ಪ್ರಸಾದ ವಿತರಣೆ ನಡೆಯುತ್ತಿದ್ದು, ಇಂದು ದೇವಸ್ಥಾನಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆ ಇದ್ದು, ನೂಕು ನುಗ್ಗಲಾಗದಂತೆ ದೇವಸ್ಥಾನದ ಸುತ್ತಲೂ ಬ್ಯಾರೀಕೇಟ್ ಅಳವಡಿಸಲಾಗಿದೆ.

    ಇನ್ನು, ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆ ಮಾಸ್ಕ್ ಹಾಕಿಕೊಂಡು ಭಕ್ತದಿಗಳು ದೇವಸ್ಥಾನಕ್ಕೆ ಬರಲು ದೇವಸ್ಥಾನದ ಆಡಳಿತ ಮಂಡಳಿ ಸೂಚಿಸಿದೆ‌.‌ ಅಲ್ಲದೇ, ಟ್ರಾಫಿಕ್ ಜಾಮ್ ಆಗುವ ಸಾಧ್ಯಾತೆಗಳು ಇರುವುದರಿಂದ ಟ್ರಾಪಿಕ್ ಪೋಲಿಸರನ್ನೂ ನಿಯೋಜನೆ ಮಾಡಲಾಗಿದೆ.‌

   ದೇವಸ್ಥಾನದಲ್ಲಿ ಬೆಳಗ್ಗೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೂ ವಿಶೇಷ ಪೂಜೆ, ಹೊಮ, ಹವನಗಳು ನೆರವೇರಲಿದ್ದು, ಮಧ್ಯರಾತ್ರಿಯವರೆಗೂ ಭಕ್ತದಿಗಳು ದೇವಸ್ಥಾನಕ್ಕೆ ಬರಲು ಅವಕಾಶ ಮಾಡಿಕೊಡಲಾಗಿದೆ.

    ವೈಕುಂಠ ಏಕಾದಶಿ ಅಂದರೆ ಹಿಂದೂಗಳಿಗೆ ಒಂದು ಸಂಭ್ರಮ. ಈ ದಿನ ದೇವಸ್ಥಾನಕ್ಕೆ ಬಂದು ವೈಕುಂಠನ ದರ್ಶನ ಮಾಡಿದ್ರೆ ಒಳ್ಳೆಯದಾಗುತ್ತೆ ಎನ್ನುವ ನಂಬಿಕೆಯಿದೆ.

    ಶ್ರೀ ವಿಷ್ಣು ದೇವರಿಗೆ ಪ್ರಿಯವಾದ ದಿನ ವೈಕುಂಠ ಏಕಾದಶಿ. ಧನುರ್ಮಾಸ ಶುಕ್ಲ ಪಕ್ಷದಲ್ಲಿ ಬರುವ ಈ ವೈಕುಂಠ ಏಕಾದಶಿಯಂದು ದೇವತೆಗಳು ಭೂ ಲೋಕಕ್ಕೆ ಬಂದು ಜಗದೊಡೆಯ ಶ್ರೀವಿಷ್ಣು ದೇವರನ್ನು ಪೂಜಿಸುತ್ತಾರೆ ಎಂದು ಪುರಾಣಗಳು ಹೇಳುತ್ತವೆ. ಆದುದರಿಂದಲೇ ಈ ದಿನದಂದು ದೇವಾಲಯದ ಉತ್ತರ ದ್ವಾರದ ಮೂಲಕ ವಿಷ್ಣುವಿನ ದರ್ಶನ ಮಾಡಿದರೆ ಸಕಲ ಪುಣ್ಯಗಳು ಪ್ರಾಪ್ತಿಯಾಗುತ್ತವೆ ಎಂಬುದು ನಂಬಿಕೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap