ಶಿವಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ಏಕನಾಥ್‌ ಶಿಂಧೆ….!

ಮುಂಬೈ: 

    ಮುಂಬರುವ ಲೋಕಸಬಾ ಚುನಾವಣೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆಯವರು ಶಿವಸಂಕಲ್ಪ ಅಭಿಯಾನವನ್ನು ಘೋಷಿಸಿದ್ದಾರೆ.

    ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ‘ಶಿವಸಂಕಲ್ಪ ಅಭಿಯಾನ’ದ ಭಾಗವಾಗಿ ರಾಜ್ಯದ 48 ಕ್ಷೇತ್ರಗಳಲ್ಲಿ ಪ್ರವಾಸ ಮಾಡುವುದಾಗಿ ಘೋಷಿಸುವ ಮೂಲಕ ಲೋಕಸಭೆ ಚುನಾವಣಾ ಪ್ರಚಾರಕ್ಕೆ ಗುರುವಾರ ಚಾಲನೆ ನೀಡಿದ್ದಾರೆ.

   ವಿಡಿಯೊ ಕಾನ್ಫರೆನ್ಸ್ ಮೂಲಕ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಿಂದೆ, 2024ರ ಲೋಕಸಭೆ ಚುನಾವಣೆಗೆ ತಯಾರಿ ನಡೆಸುವಂತೆ ಮನವಿ ಮಾಡಿದರು. 2024ರ ಮೊದಲಾರ್ಧದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ತಯಾರಿ ನಡೆಸುವಂತೆ ಹೇಳಿದರು.

    ಶಿವಸೇನೆ( ಏಕನಾಥ ಶಿಂದೆ ಬಣ), ಭಾರತೀಯ ಜನತಾ ಪಕ್ಷ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಅಜಿತ್ ಪವಾರ್ ಬಣವನ್ನು ಒಳಗೊಂಡಿರುವ ಆಡಳಿತಾರೂಢ ಮೈತ್ರಿಕೂಟ ಅಥವಾ ‘ಮಹಾಯುತಿ’ ಅಭ್ಯರ್ಥಿಗಳ ಪರ ಪ್ರಚಾರ ಮಾಡುವಂತೆ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.

    ‘ಶಿವಸಂಕಲ್ಪ ಅಭಿಯಾನವು ಜನವರಿ 6 ರಿಂದ ಯವತ್ಮಾಲ್-ವಾಶಿಮ್ ಕ್ಷೇತ್ರದಿಂದ ಪ್ರಾರಂಭವಾಗಲಿದೆ. ಮುಂದಿನ ತಿಂಗಳಲ್ಲಿ, ಶಿಂದೆ ಅವರು ರಾಜ್ಯದ ವಿವಿಧ ಪ್ರದೇಶಗಳನ್ನು ಒಳಗೊಂಡಂತೆ ಇನ್ನೂ 15 ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ’ ಎಂದು ಶಿವಸೇನೆ ತಿಳಿಸಿದೆ.

    2019ರ ಲೋಕಸಭೆ ಚುನಾವಣೆಯಲ್ಲಿ 48 ಸ್ಥಾನಗಳ ಪೈಕಿ ಬಿಜೆಪಿ 23, ಅವಿಭಜಿತ ಶಿವಸೇನೆ 18 ಹಾಗೂ ಎನ್‌ಸಿಪಿ 4 ಸ್ಥಾನಗಳನ್ನು ಗಳಿಸಿತು. ಕಾಂಗ್ರೆಸ್ ಮತ್ತು ಎಐಎಂಐಎಂ ತಲಾ ಒಂದನ್ನು ಗೆದ್ದರೆ, ಇನ್ನೊಂದು ಕ್ಷೇತ್ರ ಸ್ವತಂತ್ರ ಅಭ್ಯರ್ಥಿಯ ಪಾಲಾಗಿತ್ತು. ‌

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap