ನವದೆಹಲಿ
ಐದು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ 2023ರ ದಿನಾಂಕಗಳನ್ನು ಚುನಾವಣಾ ಆಯೋಗ ಸೋಮವಾರ ಪ್ರಕಟಿಸಲಿದೆ.
ಈ ಸಂಬಂಧ ಇಂದು ಮಧ್ಯಾಹ್ನ 12 ಗಂಟೆಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಮಾಹಿತಿ ನೀಡುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ಇದಕ್ಕೂ ಮುನ್ನ ಚುನಾವಣಾ ಆಯೋಗವು ಸುಮಾರು 300 ವೀಕ್ಷಕರ ಸಭೆ ನಡೆಸಿತ್ತು. ಭಾನುವಾರದ ನಂತರ ಯಾವುದೇ ಸಮಯದಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗಬಹುದು ಎಂದು ಹೇಳಲಾಗಿತ್ತು.ಪ್ರಸಕ್ತ ಸಾಲಿನಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ಮಿಜೋರಾಂ, ತೆಲಂಗಾಣ ಮತ್ತು ಛತ್ತೀಸ್‌ಗಢ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ.
