ಬೆಂಗಳೂರು
ಹವಾಮಾನ ಇಲಾಖೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನ ನೀಡಿದ್ದು, ಮಳೆ ಮುನ್ಸೂಚನೆ ನಡುವೆಯೂ ಚುನಾವಣಾ ಆಯೋಗ ಮೇ 10ರಂದು ನಡೆಯಲಿರುವ ಮತದಾನಕ್ಕೆ ಸಕಲ ಸಿದ್ಧತೆ ನಡೆಸಿದೆ.
ಈಗಾಗಲೇ ಕಳೆದ 10 ದಿನಗಳಿಂದ ರಾಜ್ಯಾದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ 10 ರಿಂದ 12 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇನ್ನೂ ಪಶ್ಚಿಮ ಬಂಗಾಳಕೊಲ್ಲಿಯ ಮೋಚಾ ಎಂಬ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ.
ಇದು ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ. ಇದರಿಂದ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಇನ್ನೂ ಐದು ದಿನ ಮಳೆಯ ಪ್ರಮಾಣ ಅಧಿಕವಾಗಲಿದೆ ಎಂದು ಹವಾಮಾನ ವಿಜ್ಞಾನಿ ಪ್ರಸಾದ್ ಅವರು ಮಾಹಿತಿ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ