ನವದೆಹಲಿ:
ಚುನಾವಣಾ ಬಾಂಡ್ ಗಳು ಮಾಹಿತಿ ಹಕ್ಕನ್ನು ಉಲ್ಲಂಘನೆ ಮಾಡುತ್ತವೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಇಬಿಎಸ್ ನ್ನು ನಿಷೇಧಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಚುನಾವಣಾ ಬಾಂಡ್ ಗಳನ್ನು ಅಸಾಂವಿಧಾನಿಕ ಎಂದು ಹೇಳಿದ್ದು, ಬ್ಯಾಂಕ್ ಗಳು ಚುನಾವಣಾ ಬಾಂಡ್ ಗಳನ್ನು ನೀಡುವುದನ್ನು ನಿಲ್ಲಿಸಲಿ ಎಂದು ಮಹತ್ವದ ತೀರ್ಪು ಪ್ರಕಟಿಸಿದೆ.
2019 ರಿಂದ ಎಷ್ಟು ದೇಣಿಗೆ ಬಂದಿದೆ, ಎಷ್ಟು ಹಣವನ್ನು ರಾಜಕೀಯ ಪಕ್ಷಗಳು ಬಳಸಿಕೊಂಡಿದೆ ಎಂದು ಮಾಹಿತಿ ನೀಡಲು ಇದೇ ವೇಳೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.
ಕಪ್ಪು ಹಣಕ್ಕೆ ಕಡಿವಾಣ ಹಾಕಲು ಚುನಾವಣಾ ಬಾಂಡ್ ಯೋಜನೆ ಒಂದೇ ದಾರಿಯಲ್ಲ ಅದಕ್ಕೆ ಪರ್ಯಾಯ ಮಾರ್ಗಗಳಿವೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ